ADVERTISEMENT

ಕಾರ್ಮಿಕರಿಗೆ ರಕ್ಷಣೆ ಕೊಡಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2020, 21:07 IST
Last Updated 30 ಮಾರ್ಚ್ 2020, 21:07 IST
ಹೈಕೋರ್ಟ್
ಹೈಕೋರ್ಟ್    

ಬೆಂಗಳೂರು: ‘ಕೊರೊನಾ ಸೊಂಕು ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ರಕ್ಷಣೆಗೆ ಕ್ರಮ‌ ಕೈಗೊಳ್ಳಬೇಕು’ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಪೊಲೀಸರು ಸಾರ್ವಜನಿಕರ ಮೇಲೆ ಬೇಕಾಬಿಟ್ಟಿ ಲಾಠಿ ಪ್ರಹಾರ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸಿತು.

ಬೇಕಾಬಿಟ್ಟಿ ಲಾಠಿ ಪ್ರಹಾರ ತಡೆಯಲು ಮಾರ್ಗಸೂಚಿ ರೂಪಿಸುವಂತೆ ಗೃಹ ಇಲಾಖೆಗೆ ನಿರ್ದೇಶಿಸಿತು. ಬಿಬಿಎಂಪಿ ಪೌರ ಕಾರ್ಮಿಕರ ಸುರಕ್ಷತೆಗೆ ಕ್ರಮ‌ ಕೈಗೊಳ್ಳುವಂತೆ ಸೂಚಿಸಲಾಗಿದೆ.

ADVERTISEMENT

‘ಸೂಪರ್ ಮಾರ್ಕೆಟ್‌ಗಳಲ್ಲಿಜನಸಂದಣಿ ಹಿನ್ನೆಲೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ಆದೇಶ ನೀಡಲಾಗುವುದು’ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.