ADVERTISEMENT

ಕೆಎಸ್‌ಪಿಸಿಬಿ: ಆಯ್ಕೆ ಪ್ರಕ್ರಿಯೆ ಅಂತಿಮಗೊಳಿಸದಂತೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 2:59 IST
Last Updated 11 ಸೆಪ್ಟೆಂಬರ್ 2020, 2:59 IST

ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣಾ ಮಂಡಳಿಗೆ (ಕೆಎಸ್‌ಪಿಸಿಬಿ) ಅಧ್ಯಕ್ಷ ಮತ್ತು ಕಾರ್ಯದರ್ಶಿ ಆಯ್ಕೆ ಮಾರ್ಗಸೂಚಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಾಕಿ ಇರುವ ಸಂದರ್ಭದಲ್ಲಿ ಈ ಎರಡೂ ಹುದ್ದೆಗಳಿಗೆ ನೇಮಕ ಪ್ರಕ್ರಿಯೆಯನ್ನು ಅಂತಿಮಗೊಳಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಚಿಕ್ಕಬಳ್ಳಾಪುರದ ಆರ್. ಆಂಜನೇಯರೆಡ್ಡಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ,2020ರಜೂನ್ 19ರಂದು ಹೊರಡಿಸಿರುವ ಮಾರ್ಗಸೂಚಿಗಳಲ್ಲಿನ ಕೆಲವು ಷರತ್ತುಗಳನ್ನು ಮಾರ್ಪಡಿಸಲು ರಾಜ್ಯ ಸರ್ಕಾರಕ್ಕೆ ತಿಳಿಸಿತು.

‘ಆಯ್ಕೆ ಪ್ರಕ್ರಿಯೆ ಶು‌ಕ್ರವಾರ ಆರಂಭವಾಗಲಿದೆ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ತಿಳಿಸಿದರು. ವಿಚಾರಣೆಯನ್ನು ಸೆ.15ಕ್ಕೆ ಪೀಠ ಮುಂದೂಡಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.