ADVERTISEMENT

ಪ್ರಾಯೋಗಿಕ ಪರೀಕ್ಷೆ ಮತ್ತೊಮ್ಮೆ ನಡೆಸಿ: ಹೈಕೋರ್ಟ್‌ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 19:11 IST
Last Updated 9 ಸೆಪ್ಟೆಂಬರ್ 2021, 19:11 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎಂಬಿಬಿಎಸ್‌ ಅಂತಿಮ ವರ್ಷದ ಎಂಟು ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ (ಆರ್‌ಜಿಯುಎಚ್‌ಎಸ್) ಹೈಕೋರ್ಟ್ ನಿರ್ದೇಶನ ನೀಡಿದೆ.

ಪ್ರದೀಪ್ ಶಾಗ್ ಮತ್ತು ಇತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಈ ಆದೇಶ ನೀಡಿತು.

‘ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬೇಕಾದಕನಿಷ್ಠ ಅಂಕಗಳನ್ನು ಪಡೆದಿದ್ದೇವೆ. ಆದರೂ, ಪ್ರಾಯೋಗಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿ ಅನುತ್ತೀರ್ಣ ಎಂದು ಘೋಷಿಸಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದರು.

ADVERTISEMENT

ಸೆ.14ರಿಂದ ಪೂರಕ ಪರೀಕ್ಷೆಗಳು ನಿಗದಿ ಆಗಿರುವುದರಿಂದ ಅದಕ್ಕೂ ಮುನ್ನ ಪ್ರಾಯೋಗಿಕ ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸುವಂತೆ ಪೀಠ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.