ADVERTISEMENT

ಕಚೇರಿ ಸ್ಥಳಾಂತರ: ಗಡುವಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 20:20 IST
Last Updated 14 ಜನವರಿ 2020, 20:20 IST

ಬೆಂಗಳೂರು: ‘ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ 9 ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ಮತ್ತು ಈ ಕುರಿತು ಫೆಬ್ರುವರಿ 20ರೊಳಗೆ ಮಾಹಿತಿ ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಸರ್ಕಾರದ ಪರ ವಕೀಲ ವಿ.ಶ್ರೀನಿಧಿ, ‘ಈಗಾಗಲೇ ಎರಡು ಇಲಾಖೆ ಸ್ಥಳಾಂತರಿಸಲಾಗಿದೆ. ಉಳಿದ ಇಲಾಖೆಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

‘ಗಡುವು ನಿಗದಿಪಡಿಸಿಕೊಂಡು ಫೆಬ್ರುವರಿ 20ರೊಳಗೆ ಮಾಹಿತಿ ನೀಡಿ’ ಎಂದು ಸೂಚಿ ಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.