ಬೆಂಗಳೂರು: ಹೈಕೋರ್ಟ್ ವಕೀಲರಾದ ಎಸ್.ಎನ್. ಅಶ್ವತ್ಥನಾರಾಯಣ ಮತ್ತು ಎಂ.ಎಸ್. ಶ್ಯಾಮ್ ಸುಂದರ್ ಅವರಿಗೆ ಹಿರಿಯ ವಕೀಲರಾಗಿ ಪದೋನ್ನತಿ (ಡೆಸಿಗ್ನೇಟೆಡ್ ಸೀನಿಯರ್ ಕೌನ್ಸೆಲ್) ನೀಡಿ ಆದೇಶಿಸಲಾಗಿದೆ.
ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇ ಗೌಡ ಇದೇ 24ರಂದು ಅಧಿಸೂಚನೆ ಹೊರಡಿಸಿದ್ದಾರೆ. ಈ ಹಿಂದೆ 2021ರ ಡಿಸೆಂಬರ್ 12 ಮತ್ತು 14ರಂದು ಪ್ರತ್ಯೇಕ ಅಧಿಸೂಚನೆ ಹೊರಡಿಸಿದ್ದ ಹೈಕೋರ್ಟ್, ಒಟ್ಟು 53 ವಕೀಲರಿಗೆ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.