ADVERTISEMENT

ಹೊರಟ್ಟಿ ವಿರುದ್ಧದ ವಿಚಾರಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2022, 17:08 IST
Last Updated 31 ಜನವರಿ 2022, 17:08 IST

ಬೆಂಗಳೂರು: ಜಾತಿ ನಿಂದನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಬಸವರಾಜ ಹೊರಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ದೂರುದಾರರು, ರಾಜ್ಯ ಸರ್ಕಾರ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.