ADVERTISEMENT

ಬಿಡಿಎಗೆ ಈಸ್ಟ್ ಇಂಡಿಯಾ ಕಂಪನಿ ಮನಃಸ್ಥಿತಿ: ಹೈಕೋರ್ಟ್ ಛೀಮಾರಿ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2023, 4:45 IST
Last Updated 16 ಮಾರ್ಚ್ 2023, 4:45 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಈಸ್ಟ್ ಇಂಡಿಯಾ ಕಂಪನಿಯ ಮನಃಸ್ಥಿತಿ ಹೊಂದಿದೆ’ ಎಂದು ಛೀಮಾರಿ ಹಾಕಿರುವ ಹೈಕೋರ್ಟ್, ಭೂ ಸ್ವಾಧೀನದ ವ್ಯಾಜ್ಯವೊಂದರಲ್ಲಿ ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರ ನೀಡದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಜಯಮ್ಮ ಮತ್ತಿತರರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಟಿಡಿಆರ್ ನೀಡಲು ಆಗುವುದಿಲ್ಲ’ ಎಂದು ಬಿಡಿಎ ನೀಡಿದ್ದ ಆದೇಶ
ವನ್ನು ರದ್ದುಗೊಳಿಸಿದೆ.

‘ಅರ್ಜಿದಾರರಿಗೆ ಟಿಡಿಆರ್‌ ಪ್ರಮಾಣ ಪತ್ರಗಳನ್ನು ವಿತರಿಸಬೇಕು. ಮೂರು ತಿಂಗಳಲ್ಲಿ ಹೈಕೋರ್ಟ್ ಆದೇಶ ಪಾಲನೆ ಬಗ್ಗೆ ರಿಜಿಸ್ಟ್ರಾರ್ ಜನರಲ್‌ ಅವರಿಗೆ ಈ ಕುರಿತ ವರದಿ ನೀಡಬೇಕು’ ಎಂದು ನಿರ್ದೇಶಿಸಿದೆ.

ADVERTISEMENT

‘ಒಂದು ವೇಳೆ ಕೋರ್ಟ್ ಆದೇಶ ಪಾಲನೆ ವಿಳಂಬವಾದರೆ ಬಿಡಿಎ ಆಯುಕ್ತರು ಪ್ರತಿದಿನಕ್ಕೆ
₹1 ಸಾವಿರವನ್ನು ಅರ್ಜಿದಾರರಿಗೆ ದಂಡವಾಗಿ ಪಾವತಿಸಬೇಕು ಮತ್ತು ಆ ದಂಡದ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಯಿಂದ ನಿಯಮಾನುಸಾರ ವಸೂಲು ಮಾಡಬೇಕು’ ಎಂದೂ ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.