ADVERTISEMENT

ಬಿಬಿಎಂಪಿ ವ್ಯಾಪ್ತಿ ರಾಜಕಾಲುವೆಗಳ ಕುರಿತ ಸಮಗ್ರ ವರದಿಗೆ ಹೈಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2019, 14:13 IST
Last Updated 7 ನವೆಂಬರ್ 2019, 14:13 IST
   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜಕಾಲುವೆಗಳ ಸ್ಥಿತಿಗತಿಗಳ ಕುರಿತು ಸಮಗ್ರ ವರದಿ ನೀಡುವಂತೆ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳನ್ನು ಮುಚ್ಚಬಾರದು ಎಂದು ತಜ್ಞರ ಸಮಿತಿ‌ ಅಭಿಪ್ರಾಯಪಟ್ಟಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಹೇಳಿಕೆಯಪರಿಗಣಿಸಿದ ನ್ಯಾಯಪೀಠ, "ನಗರದಲ್ಲಿ ಎಲ್ಲೆಲ್ಲಿ ರಾಜಕಾಲುವೆಗಳ ಹೂಳು ತೆಗೆಯಲಾಗಿದೆ, ಎಲ್ಲೆಲ್ಲಿ ಚೈನ್ ಲಿಂಕ್ ಹಾಕಲಾಗಿದೆ, ಮತ್ತು ಯಾವ ಪ್ರದೇಶದಲ್ಲಿ ಚೈನ್ ಲಿಂಕ್ ಅಳವಡಿಸಬೇಕು, ಎಲ್ಲಿ ಅಳವಡಿಸಲಾಗುವುದಿಲ್ಲ ಎಂಬ ಬಗ್ಗೆ ವರದಿ ಸಲ್ಲಿಸಿ" ಎಂದು ಬಿಬಿಎಂಪಿಗೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT