ಬೆಂಗಳೂರು: ‘ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಪ್ರೊಫೆಸರ್ ಸಿದ್ದು ಪಿ. ಅಲಗೂರು ಅವರನ್ನು ಬಳ್ಳಾರಿ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ನೇಮಕ ಮಾಡಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸಿದ್ದು ಪಿ. ಅಲಗೂರು ಸೇರಿದಂತೆ ಇತರರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಮಾರ್ಚ್ 31ಕ್ಕೆ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.