ADVERTISEMENT

ಹೈಕೋರ್ಟ್‌: ಕ್ಯಾಟಿನಾ ಹೋಮ್ಸ್‌ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2025, 19:59 IST
Last Updated 6 ನವೆಂಬರ್ 2025, 19:59 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಮನೆ ಲೀಸ್​ಗೆ ಕೊಡಿಸುವ ಹೆಸರಿನಲ್ಲಿ ನೂರಾರು ಮಂದಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ಅನುಮತಿ ನೀಡಿದ್ದ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ ಆದೇಶ ರದ್ದುಪಡಿಸಬೇಕು ಎಂದು ಕೋರಿ, ‘ಕ್ಯಾಟೆನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಸಿಐಡಿ ತನಿಖೆ ರದ್ದುಗೊಳಿಸುವಂತೆ ಕೋರಿ ಕಂಪನಿಯ ನಿರ್ದೇಶಕ ವಿವೇಕ್‌ ಕೇಶವನ್‌ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದ್‌ ರಾಜ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಆರೋಪಿಯೇ ತನಿಖಾ ತಂಡವನ್ನು ಆಯ್ಕೆ ಮಾಡಲಾಗದು’ ಎಂದು ಕಿಡಿ ಕಾರುವ ಮೂಲಕ ಅರ್ಜಿ ವಜಾಗೊಳಿಸಿದೆ.

‘ಕ್ಯಾಟೆನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ಮಾಲೀಕ ಹಾಗೂ ನಿರ್ದೇಶಕ ವಿವೇಕ್ ಕೇಶವನ್‌ ವಿರುದ್ಧ ಪರಪ್ಪನ ಅಗ್ರಹಾರ, ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಎಫ್​ಐಆರ್​​ ದಾಖಲಾಗಿದ್ದವು. ಪ್ರಕರಣವನ್ನು ಡಿಜಿಪಿ 2025ರ ಸೆಪ್ಟೆಂಬರ್ 29ರಂದು ಸಿಐಡಿ ಪೊಲೀಸರ ತನಿಖೆಗೆ ಒಪ್ಪಿಸಿ ಪತ್ರ ನೀಡಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.