ADVERTISEMENT

ನೆಲಮಂಗಲ | ಕಾರು ಅಪಘಾತ: ಆಂಧ್ರದ ವ್ಯಕ್ತಿ ಸಾವು

​ಪ್ರಜಾವಾಣಿ ವಾರ್ತೆ
Published 31 ಮೇ 2025, 16:15 IST
Last Updated 31 ಮೇ 2025, 16:15 IST
ಅಪಘಾತ ಸ್ಥಳವನ್ನು ಪರಿಶೀಲಿಸಿದ ನೆಲಮಂಗಲ ಸಂಚಾರ ಪೊಲೀಸರು
ಅಪಘಾತ ಸ್ಥಳವನ್ನು ಪರಿಶೀಲಿಸಿದ ನೆಲಮಂಗಲ ಸಂಚಾರ ಪೊಲೀಸರು   

ನೆಲಮಂಗಲ: ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್‌ ಹಾಗೂ ಕಾರು ಮಧ್ಯೆ ರಾಷ್ಟ್ರೀಯ ಹೆದ್ದಾರಿ–48ರ ತೊಣಚಿನಕುಪ್ಪೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶ ಓಬಳರೆಡ್ಡಿ(27) ಮೃತಪಟ್ಟವರು. ಬೆಂಗಳೂರಿನ ಅತ್ತಿಬೆಲೆಯಲ್ಲಿ ನೆಲಸಿದ್ದರು. ರಿಯಲ್‌ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು.

ಕಾರಿನಲ್ಲಿ ಮೂವರು ಸ್ನೇಹಿತರು ಪ್ರಯಾಣಿಸುತ್ತಿದ್ದರು. ಕಾರು ಚಾಲಕ ಸುನೀಲ್ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಿವ್ಯಾ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. 

ADVERTISEMENT

ಕಾರಿನ ಎಡಬದಿಗೆ ಬಸ್‌ ಡಿಕ್ಕಿಯಾದ ಪರಿಣಾಮ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಓಬಳರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
 

ಓಬಳರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.