ADVERTISEMENT

ಹಿಂದಿ ದಿವಸಕ್ಕೆ ತೀವ್ರ ಆಕ್ಷೇಪ: ಕನ್ನಡಪರ ಸಂಘಟನೆಗಳಿಂದ ಇಂದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2022, 20:30 IST
Last Updated 13 ಸೆಪ್ಟೆಂಬರ್ 2022, 20:30 IST
   

ಬೆಂಗಳೂರು: ಕೇಂದ್ರ ಸರ್ಕಾರವು ಸೆ. 14ರಂದು ಆಚರಣೆ ಮಾಡುವ ಹಿಂದಿ ದಿವಸ್‌ಗೆ ಜೆಡಿಎಸ್, ಕೆಆರ್‌ಎಸ್ ಪಕ್ಷಗಳೂ ಸೇರಿ ವಿವಿಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.

‘ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ದೇಶ ರಚನೆಯಾಗಿದೆ. ಆದರೆ, ಸ್ವಾತಂತ್ರ್ಯಾ ನಂತರ ಕೇಂದ್ರದಲ್ಲಿ ಆಡಳಿತ ನಡೆಸಿರುವ ಎಲ್ಲಾ ಪಕ್ಷಗಳು ಸೆಪ್ಟೆಂಬರ್ ತಿಂಗಳಲ್ಲಿ ಹಿಂದಿ ಸಪ್ತಾಹ ಮತ್ತು ಸೆ. 14ರಂದು ಹಿಂದಿ ದಿವಸ್ ಆಚರಣೆ ಮಾಡುತ್ತಿವೆ. ದೇಶದ ಎಲ್ಲಾ ಭಾಷೆಯ ಜನರ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ಹಿಂದಿಯೇತರ ರಾಜ್ಯಗಳಲ್ಲಿ ನಡೆಸುವ ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಬುಧವಾರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡ
ಲಾಗುವುದು’ ಎಂದು ಕರವೇ (ಟಿ.ಎ. ನಾರಾಯಣಗೌಡ) ಬಣ ತಿಳಿಸಿದೆ.

ಕೇಂದ್ರ ಸರ್ಕಾರವೂ ದೇಶದ ಸಾವಿರಾರೂ ಪ್ರಾದೇಶಿಕ ಭಾಷೆಗಳಿಗೆ ಮೋಸ ಮಾಡಿ ಹಿಂದಿ ದಿವಸ್ ಆಚರಣೆ ಮಾಡುತ್ತಾ ಬಂದಿದೆ. ಹಿಂದಿ ಭಾಷೆಗೆ 400 ವರ್ಷಗಳ ಇತಿಹಾಸವಿದೆ. ಆದರೆ ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ನೆನಪಿಗೆ ಬರುವುದಿಲ್ಲವೋ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದರು.

ADVERTISEMENT

‘ಹಿಂದಿ ದಿವಸ್ ಹಿಂದಿ ಭಾಷಿಕ ರಾಜ್ಯಗಳಿಗೆ ಸೀಮಿತವಾಗಲಿ. ನಮಗೆ ಅದರ ಅವಶ್ಯಕತೆಯಿಲ್ಲ. ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಜಾಗೃತಿ ಮೂಡಿಸಬೇಕು. ಕನ್ನಡ ಬಾವುಟ ಮತ್ತು ಶಾಲು ಹಾಕಿಕೊಳ್ಳುವ ಮೂಲಕ ಕನ್ನಡದ ಶಕ್ತಿ ಪ್ರದರ್ಶನ ಮಾಡಬೇಕು’ ಎಂದು ಸಲಹೆ ನೀಡಿದರು.

‘ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆಯಿಲ್ಲ ಎಂಬುದನ್ನು ಸಂವಿಧಾನ ಸ್ಪಷ್ಟವಾಗಿ ತಿಳಿಸಿದೆ’ ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟಗಳು ಪ್ರಕಟಣೆಯಲ್ಲಿ ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.