ADVERTISEMENT

28ರಿಂದ ಹಿಂದೂ ರಾಷ್ಟ್ರ ಅಧಿವೇಶನ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 19:57 IST
Last Updated 25 ಜನವರಿ 2023, 19:57 IST
   

ಬೆಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜ. 28, 29ರಂದು ‘ಹಿಂದೂ ರಾಷ್ಟ್ರ ಅಧಿವೇಶನ’ವನ್ನು ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಗಂಗಮ್ಮ ತಿಮ್ಮಯ್ಯ ಕನ್ವೆನ್ಷನ್‌ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ.

‘ಈ ಅಧಿವೇಶನದಲ್ಲಿ ಲವ್‌ ಜಿಹಾದ್, ಹಲಾಲ್‌ ಜಿಹಾದ್, ಲ್ಯಾಂಡ್ ಜಿಹಾದ್, ಹಿಂದೂ ಕಾರ್ಯಕರ್ತರ ಹತ್ಯೆ, ಇತಿಹಾಸದ ವಿಕೃತೀಕರಣ, ಹಿಂದೂ ಧರ್ಮ ಪರಂಪರೆಗಳ ಮೇಲೆ ಆಘಾತ, ದೇವಸ್ಥಾನಗಳ ಸರ್ಕಾರೀಕರಣ, ಗೋರಕ್ಷಣೆ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಸಮಿತಿಯ ವಕ್ತಾರ ಮೋಹನ್ ಗೌಡ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಚಕ್ರವರ್ತಿ ಸೂಲಿಬೆಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ರಮೇಶ ಶಿಂಧೆ, ಎಸ್.ಆರ್. ಲೀಲಾ, ಸಂದೀಪ್ ಬಾಲಕೃಷ್ಣನ್, ಅಡ್ಡಂಡ ಕಾರ್ಯಪ್ಪ, ನಿರ್ದೇಶಕ ಪ್ರಕಾಶ್ ಬೆಳವಾಡಿ, ಕಿರಣ ಬೆಟ್ಟದಪುರ ಅವರು ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಧಿವೇಶನದಲ್ಲಿ 100ಕ್ಕೂ ಅಧಿಕ ಹಿಂದೂ ಸಂಘಟನೆಗಳ 500ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.