ADVERTISEMENT

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMP ವೈರಸ್ ಪತ್ತೆ: ಆತಂಕ ಇಲ್ಲ ಎಂದ ವೈದ್ಯರು

ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.

​ಪ್ರಜಾವಾಣಿ ವಾರ್ತೆ
Published 6 ಜನವರಿ 2025, 5:55 IST
Last Updated 6 ಜನವರಿ 2025, 5:55 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಹ್ಯೂಮನ್ ಮೆಟಾನ್ಯುಮೊವೈರಸ್ (ಎಚ್‌ಎಂಪಿವಿ) ಎರಡು ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನ 8 ತಿಂಗಳ ಮಗು ಹಾಗೂ ಇನ್ನೊಂದು ಮಗುವಿನಲ್ಲಿ ಎಚ್‌ಎಂಪಿವಿ ಪತ್ತೆಯಾಗಿದೆ ಎಂದು ಹೇಳಿದೆ.

ADVERTISEMENT

8 ತಿಂಗಳ ಮಗುವನ್ನು ಶೀತ, ಜ್ವರ ಬಂದಿದ್ದ ಕಾರಣ ಮಗುವನ್ನು ಹೆತ್ತವರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಅಲ್ಲಿ ಪರೀಕ್ಷೆ ಮಾಡಿದಾಗ ಎಚ್ಎಂಪಿವಿ ಕಂಡುಬಂದಿದೆ.

ಪ್ರತಿವರ್ಷ ಚಳಿಗಾಲ ಬಂದಾಗ ಶೀತ, ಜ್ವರ ಉಂಟಾಗುವುದು ಸಾಮಾನ್ಯ. ಅದಕ್ಕೆ ವೈರಾಣು ಕಾರಣ ಆಗಿರುತ್ತದೆ. ವೈರಾಣು ಆಗಾಗ ತನ್ನ ಗುಣ ಲಕ್ಷಣಗಳನ್ನು ಬದಲಾಯಿಸುತ್ತಿರುತ್ತದೆ. ಈ ಬಾರಿ ಅದಕ್ಕೆ ಎಚ್ಎಂಪಿವಿ ಎಂದು ಹೆಸರಿಡಲಾಗಿದೆ. ಅಪಾಯಕಾರಿ ವೈರಸ್ ಅಲ್ಲ ಇದು ಎಂದು ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾ. ಧನಂಜಯ ಟಿ. ಎನ್. ತಿಳಿಸಿದ್ದಾರೆ.

ಜ್ವರ, ಶೀತ ಇತ್ತೀಚೆಗೆ ಬಂದವರಿಗೆ ಎಚ್ಎಂಪಿವಿ ಬಂದು ಹೋಗಿರಬಹುದು. ಪರೀಕ್ಷೆ ಮಾಡದೇ ಇರೋದ್ರಿಂದ ಗೊತ್ತಾಗಿರಲ್ಲ. ಇದು ಸಾಮಾನ್ಯ ವೈರಸ್ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಇಲಾಖೆಯು ವಿಶ್ವ ಅರೋಗ್ಯ ಸಂಸ್ಥೆ, ಭಾರತದ ಅರೋಗ್ಯ ಸಚಿವಾಲಯದ ನಿರ್ದೇಶನದಂತೆ ಕಾರ್ಯ ನಿರ್ವಹಿಸಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.