ADVERTISEMENT

ರಾಜ್ಯವನ್ನು ವಿಶ್ವದಲ್ಲೇ ಪ್ರಬಲ ಮಾಡುತ್ತೇವೆ: ಗೃಹ ಸಚಿವ ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2023, 19:30 IST
Last Updated 26 ಮಾರ್ಚ್ 2023, 19:30 IST
ವಿಧಾನಸೌಧದ ಮುಂದೆ ಭಾನುವಾರ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನಾವರಣ ಮಾಡಿದರು. ಶಾಸಕ ಎಂ.ಕೃಷ್ಣಪ್ಪ, ಶಾಸಕ ಬಿ.ಎಸ್.ಯಡಿಯೂರಪ್ಪ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಡುಪಿ ಪೇಜಾವರ ಮಠ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಸ್ವಾಮೀಜಿ, ಗುರುಗುಂಡ ಭದ್ರೇಶ್ವರ ಸ್ವಾಮಿ ಮಠದ ನಂಜಾವಧೂತ ಸ್ವಾಮೀಜಿ, ಕಂದಾಯ ಸಚಿವ ಆರ್. ಅಶೋಕ ಮತ್ತು ಚಿತ್ರದುರ್ಗ ಶಿವಶರಣ ಮಾದಾರ ಚನ್ನಯ್ಯ ಗುರುಪೀಠ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಇದ್ದಾರೆ  –ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಕರ್ನಾಟಕದಲ್ಲಿ ಮುಂದಿನ ಅವಧಿಗೆ ಬಿಜೆಪಿ ಸರ್ಕಾರ ರಚನೆಯಾದರೆ ದೇಶದಲ್ಲಿ ಅಷ್ಟೇ ಅಲ್ಲ, ವಿಶ್ವದ ಎಲ್ಲ ರಾಜ್ಯಗಳಲ್ಲಿ ಅತ್ಯಂತ ಪ್ರಬಲ ರಾಜ್ಯವನ್ನಾಗಿ ಮಾಡುವ ಯೋಜನೆ ಈ ಡಬಲ್‌ ಎಂಜಿನ್‌ ಸರ್ಕಾರ ಹೊಂದಿದೆ, ಅದನ್ನು ಸಾಧಿಸಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.

ವಿಧಾನಸೌಧದ ಮುಂಭಾಗ ಜಗಜ್ಯೋತಿ ಬಸವೇಶ್ವರ ಹಾಗೂ ನಾಡಪ್ರಭು ಕೆಂಪೇಗೌಡ ಪ್ರತಿಮೆಗಳನ್ನು ಅನಾವರಣಗೊಳಿಸಿ ಭಾನುವಾರ ಅವರು ಮಾತನಾಡಿದರು.

‘ಮುಖ್ಯಮಂತ್ರಿ ಕುರ್ಚಿಗಾಗಿ ಈಗಿನಿಂದಲೇ ಪರಸ್ಪರ ಕಾಲೆಳೆಯುವ ಕಾರ್ಯದಲ್ಲಿ ತೊಡಗಿರುವ ಪಕ್ಷದ ಆಡಳಿತ ಕರ್ನಾಟಕಕ್ಕೆ ಬೇಡ. ಪ್ರಧಾನಿ ನರೇಂದ್ರ ಮೋದಿ ಅವರ ಸದೃಢ, ದೂರದೃಷ್ಟಿಯ ಬಿಜೆಪಿ ಆಡಳಿತಕ್ಕೆ ನೀವೆಲ್ಲ ಆಶೀರ್ವಾದ ನೀಡಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು.

ADVERTISEMENT

‘ತೆರಿಗೆ ಹಾಗೂ ಸಹಾಯಧನ ಎರಡು ಬಾಬ್ತಿನಲ್ಲಿ 2009 ರಿಂದ 2014 ರವರೆಗೆ ಕರ್ನಾಟಕಕ್ಕೆ ₹94 ಸಾವಿರ ಕೋಟಿ ನೀಡಲಾಗಿತ್ತು. ಮೋದಿ ನೇತೃತ್ವದ 2014 ರಿಂದ 2019ರ ಸರ್ಕಾರ 2.25 ಲಕ್ಷ ಕೋಟಿ ನೀಡಿದೆ. ಶೇ 140ಕ್ಕೂ ಹೆಚ್ಚು ಅನುದಾನ ನೀಡಿದೆ. ಕೃಷ್ಣಾ ಮೇಲ್ದಂಡೆ, ಕಳಸಾ ಬಂಡೂರಿ, ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೆ, ವಂದೇ ಭಾರತ ಸೇರಿದಂತೆ ಹಲವು ಯೋಜನೆಗಳು ನಮ್ಮ ಸರ್ಕಾರದ್ದವು’ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ‘ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಡೀ ದೇಶವನ್ನು ಮತ್ತೆ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ನಮ್ಮ ರಾಜ್ಯ, ಆಂಧ್ರಪ್ರದೇಶ, ಒಡಿಶಾದಲ್ಲಿ ನಕ್ಸಲರ ಹಾವಳಿ ಇತ್ತು. ಅಲ್ಲದೇ ಅನೇಕ‌ ವಿಚ್ಚಿದ್ರಕಾರಿ ಶಕ್ತಿಗಳನ್ನು ದಮನ ಮಾಡಿ ಇಡಿ ದೇಶವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತಿದ್ದಾರೆ’ ಎಂದು ಹೇಳಿದರು. ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸಂಸದರಾದ ಪಿ.ಸಿ. ಮೋಹನ್‌, ತೇಜಸ್ವಿ ಸೂರ್ಯ ಹಾಗೂ ಬೆಂಗಳೂರಿನ ಸಚಿವರು ಹಾಗೂ ಬಿಜೆಪಿ ಶಾಸಕರು
ಇದ್ದರು.‌

ಸುವರ್ಣ ವಿಧಾನಸೌಧದಲ್ಲಿ ಚನ್ನಮ್ಮ, ರಾಯಣ್ಣ ಪ್ರತಿಮೆ: ಬೆಂಗಳೂರಿನ ಬನಶಂಕರಿಯಲ್ಲಿ ಸುತ್ತೂರು ಶ್ರೀಗಳ ಪುತ್ಥಳಿಯನ್ನು ಮಂಗಳವಾರ ಉದ್ಘಾಟಿಸಲಾಗುತ್ತದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಡಾ. ಅಂಬೇಡ್ಕರ್‌ ಅವರ ಪ್ರತಿಮೆಗಳನ್ನು ಮಾರ್ಚ್‌ 28ರಂದು ಪ್ರತಿಷ್ಠಾಪಿಸಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.