ADVERTISEMENT

ಟೋಯಿಂಗ್‌ ಪುನರಾರಂಭದ ಪ್ರಸ್ತಾವವಿಲ್ಲ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2022, 0:53 IST
Last Updated 18 ಸೆಪ್ಟೆಂಬರ್ 2022, 0:53 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ನಗರದಲ್ಲಿ ವಾಹನಗಳ ಟೋಯಿಂಗ್‌ ವ್ಯವಸ್ಥೆಯನ್ನು ಪುನ ರಾರಂಭಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಬೆಂಗಳೂರಿನಲ್ಲಿ ಜನಸ್ನೇಹಿ ಮತ್ತು ಸುಗಮ ಪಾರ್ಕಿಂಗ್‌ ಪದ್ಧತಿ ಜಾರಿಗೊಳಿಸಲು ಸರ್ಕಾರ ಯೋಚಿಸಿದೆ. ಅದಕ್ಕೆ ಪೂರಕವಾಗಿ ಅಧಿಕಾರಿಗಳು ಹಾಗೂ ತಜ್ಞರ ಜತೆ ಚರ್ಚಿಸಲಾಗಿದೆ. ಅವರ ಸಲಹೆ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಅವರೊಂದಿಗೂ ಚರ್ಚಿ ಸಲಾಗಿದೆ. ಟೋಯಿಂಗ್‌ ಸಂಬಂ ಧಿಸಿದಂತೆ ಯಾವುದೇ ತೀರ್ಮಾನ ಅಂತಿಮವಾಗಿಲ್ಲ’ ಎಂದು ಹೇಳಿದ್ದಾರೆ.

‘ಹಿಂದಿನ ವ್ಯವಸ್ಥೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಮತ್ತೆ ಅದೇ ವ್ಯವಸ್ಥೆ ಜಾರಿಗೊಳಿಸಲು ಸಾಧ್ಯವಿಲ್ಲ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.