ಉಡುಪಿ: ಬೆಂಗಳೂರಿನ ಡಿಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಚಿವರು, ಗಲಭೆ ಸ್ಥಳಕ್ಕೆ ಹೆಚ್ಷುವರಿ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ. ಪರಿಸ್ಥಿತಿಯನ್ನುನಿಯಂತ್ರಣಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಕಾನೂನು ಕೈಗೆತ್ತಿಕೊಂಡವರು ಎಷ್ಟೆ ದೊಡ್ಡವರಾದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸರಿಗೆ ಸೂಚಿಸಲಾಗಿದೆ. ಯಾರೂ ಉದ್ವೇಗಕ್ಕೆ ಒಳಗಾಗಬಾರದು ಎಂದು ಗೃಹ ಸಚಿವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.