ADVERTISEMENT

‘ಜೇನು ರಫ್ತಿಗೆ ವಿಫುಲ ಅವಕಾಶ’

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2021, 19:45 IST
Last Updated 26 ಮಾರ್ಚ್ 2021, 19:45 IST
ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಅವರು ರೈತರಿಗೆ ಜೇನುಕೃಷಿ ಪರಿಕರಗಳನ್ನು ವಿತರಿಸಿದರು
ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಅವರು ರೈತರಿಗೆ ಜೇನುಕೃಷಿ ಪರಿಕರಗಳನ್ನು ವಿತರಿಸಿದರು   

ಯಲಹಂಕ: ಜೇನುತುಪ್ಪದಲ್ಲಿ ಕಲಬೆರಕೆ ತಡೆಗಟ್ಟುವುದರ ಜೊತೆಗೆ ಗುಣಮಟ್ಟ ಕಾಯ್ದುಕೊಂಡು ನಿರ್ದಿಷ್ಟ ಬ್ರ್ಯಾಂಡ್ ಸೃಷ್ಟಿಸಿಕೊಂಡರೆ ಹೊರರಾಜ್ಯ ಮತ್ತು ರಾಷ್ಟ್ರಗಳಿಗೆ ರಫ್ತು ಮಾಡಲು ವಿಫುಲ ಅವಕಾಶಗಳಿವೆ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಹೇಳಿದರು.

ಅಖಿಲಭಾರತ ಸುಸಂಘಟಿತ ಜೇನುನೊಣ ಮತ್ತು ಪರಾಗಸ್ಪರ್ಶಗಳ ಸಂಶೋಧನಾ ಪ್ರಾಯೋಜನೆ ಹಾಗೂ ಜೇನುಕೃಷಿ ವಿಭಾಗದ ಆಶ್ರಯದಲ್ಲಿ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಜೇನುಸಾಕಾಣಿಕೆ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

‘ಜೇನುತುಪ್ಪದಲ್ಲಿ ಕಲಬೆರಕೆ ಪದಾರ್ಥಗಳನ್ನು ಪತ್ತೆಹಚ್ಚಿ, ಗುಣಮಟ್ಟವನ್ನು ದೃಢಪಡಿಸುವ ನಿಟ್ಟಿನಲ್ಲಿ ಉತ್ಕೃಷ್ಟಜೇನು ಪ್ರಯೋಗಾಲಯ ಸ್ಥಾಪಿಸುವ ಸಂಬಂಧ ಅನುದಾನ ಬಿಡುಗಡೆಗಾಗಿ ಕೇಂದ್ರ ಮತ್ತು ರಾಜ್ಯಸರ್ಕಾರಗಳಿಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

ADVERTISEMENT

ಕೃಷಿ ವಿಶ್ವವಿದ್ಯಾಲಯದ ಹಿರಿಯ ವಿಜ್ಞಾನಿ ಡಾ.ಎಸ್.ನಿರಂಜನಮೂರ್ತಿ, ‘ಸಮಗ್ರ ಕೃಷಿಪದ್ಧತಿಯಲ್ಲಿ ಜೇನುಕೃಷಿಯನ್ನು ಉಪಕಸುಬನ್ನಾಗಿ ಅಳವಡಿಸಿಕೊಳ್ಳುವುದರಿಂದ ಆರೋಗ್ಯಯುತ ಜೇನು ದೊರೆಯುವುದರ ಜೊತೆಗೆ ಬೆಳೆಗಳ ಇಳುವರಿಯೂ ಹೆಚ್ಚಾಗಲಿದೆ’ ಎಂದರು.

ಮದಕರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಡಿ.ಎ.ನಾಗರಾಜು, ಜೇನುಕೃಷಿ ವಿಭಾಗದ ಮುಖ್ಯಸ್ಥರಾದ ಡಾ.ಕೆ.ಎಸ್.ಜಗದೀಶ್, ಡಾ.ಕೆ.ಟಿ. ವಿಜಯಕುಮಾರ್, ಸಂಪನ್ಮೂಲ ವ್ಯಕ್ತಿ ಜಿ.ಈಶ್ವರಪ್ಪ, ನಿವೃತ್ತ ಪ್ರಾಧ್ಯಾಪಕ ಡಾ.ಎನ್.ಎಸ್.ಭಟ್, ಡಾ.ಜೆ.ಸಿ.ಕುಬೇರಪ್ಪ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.