
ಪಾಲಿಕೆ ಸಿಬ್ಬಂದಿ ಬ್ಲ್ಯಾಕ್ ಸ್ಪಾಟ್' ತೆರವುಗೊಳಿಸಿದರು
ಕೆ.ಆರ್.ಪುರ: ಹೂಡಿ ಗ್ರಾಮದ ವ್ಯಾಪ್ತಿಯಲ್ಲಿ ಪ್ರಮುಖ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಗರ ಪಾಲಿಕೆ ಸಿಬ್ಬಂದಿ ಗುರುವಾರ ಸ್ವಚ್ಚತಾ ಕಾರ್ಯ ಕೈಗೊಂಡರು.
‘ಹೂಡಿಯಲ್ಲಿ ಹೆಚ್ಚಾದ 'ಬ್ಲ್ಯಾಕ್ ಸ್ಪಾಟ್’ ವರದಿಯು
‘ಪ್ರಜಾವಾಣಿ’ಯಲ್ಲಿ ಬುಧವಾರ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ನಗರ ಪಾಲಿಕೆ ಅಧಿಕಾರಿಗಳು ಸ್ವಚ್ಛತಾ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ತ್ಯಾಜ್ಯವನ್ನು ಸ್ವಚ್ಛಗೊಳಿಸಿದರು. ‘ಹೂಡಿ ಗ್ರಾಮದ ಪ್ರಮುಖ ರಸ್ತೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸ ಸುರಿಯುತ್ತಿರುವ ಕುರಿತು ‘ಪ್ರಜಾವಾಣಿ’ ಮೂಲಕ ಗಮನಕ್ಕೆ ಬಂದಿತು. ಹೀಗಾಗಿ, ಸಿಬ್ಬಂದಿ ಮೂಲಕ ಕಸ ತೆರವುಗೊಳಿಸುವ ಕೆಲಸ ಮಾಡಿದ್ದೇವೆ. ಹೂಡಿ, ಹೂಡಿ ಮುಖ್ಯರಸ್ತೆ, ವೈಟ್‌ಫೀಲ್ಡ್ ರಸ್ತೆ, ಒಂದನೇ ಅಡ್ಡರಸ್ತೆ, ಮಾರಮ್ಮ ದೇವಸ್ಥಾನದ ರಸ್ತೆಗಳಲ್ಲಿ ಬಿದ್ದಿದ್ದ ಕಸದ ರಾಶಿಯನ್ನು ತೆರವು
ಗೊಳಿಸಲಾಗಿದೆ’ ಎಂದು ಪೂರ್ವ ನಗರ ಪಾಲಿಕೆ ಅಧಿಕಾರಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜ್ಯೋತಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.