ADVERTISEMENT

ಹೂಡಿ ರೈಲು ನಿಲ್ದಾಣ: ಪ್ಲ್ಯಾಟ್‌ಫಾರಂ ಲೋಕಾರ್ಪಣೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2019, 19:56 IST
Last Updated 22 ಫೆಬ್ರುವರಿ 2019, 19:56 IST
ಹೂಡಿ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆ, ಪ್ಲಾಟ್‌ಫಾರಂಗಳನ್ನು ಪಿ.ಸಿ.ಮೋಹನ್‌ ಹಾಗೂ ಅರವಿಂದ ಲಿಂಬಾವಳಿ ಉದ್ಘಾಟಿಸಿದರು. ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಆರ್‌.ಎಸ್‌.ಸಕ್ಸೇನಾ ಇದ್ದಾರೆ.
ಹೂಡಿ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆ, ಪ್ಲಾಟ್‌ಫಾರಂಗಳನ್ನು ಪಿ.ಸಿ.ಮೋಹನ್‌ ಹಾಗೂ ಅರವಿಂದ ಲಿಂಬಾವಳಿ ಉದ್ಘಾಟಿಸಿದರು. ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕ ಆರ್‌.ಎಸ್‌.ಸಕ್ಸೇನಾ ಇದ್ದಾರೆ.   

ಬೆಂಗಳೂರು: ಹೂಡಿ ರೈಲು ನಿಲ್ದಾಣದಲ್ಲಿ ಎರಡು ಪ್ಲಾಟ್‌ಫಾರಂ,ನೂತನ ವಿಶ್ರಾಂತಿ ತಾಣ ಹಾಗೂ ಎರಡು ಪಾದಚಾರಿ ಮೇಲ್ಸೇತುವೆಗಳನ್ನು ಸಂಸದ ಪಿ.ಸಿ.ಮೋಹನ್ ಹಾಗೂ ಶಾಸಕ ಅರವಿಂದ ಲಿಂಬಾವಳಿ ಲೋಕಾರ್ಪಣೆಗೊಳಿಸಿದರು.

ಮಾಹಿತಿ ತಂತ್ರಜ್ಞಾನ ಕಂಪನಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಹೂಡಿ ಪರಿಸರದಲ್ಲಿ ವಾಹನ ದಟ್ಟಣೆ, ವಾಯುಮಾಲಿನ್ಯ ಸಮಸ್ಯೆಯಿಂದ ಜನ ಹೈರಾಣಾಗಿದ್ದರು. ಸ್ಥಳೀಯರ ಒತ್ತಾಯದ ಮೇರೆಗೆ ಪಿ.ಸಿ.ಮೋಹನ್ ಅವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ನಿಲ್ದಾಣದ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡಿದ್ದರು.

ಕಾರ್ಮೆಲರಾಮ್ ರೈಲು ನಿಲ್ದಾಣದ ಬಳಿ ಕಿರಿದಾದ ಲೆವೆಲ್ ಕ್ರಾಸಿಂಗ್‌ನಿಂದಾಗಿ ಭಾರಿ ವಾಹನ ದಟ್ಟಣೆ ಉಂಟಾಗುತ್ತಿತ್ತು. ಈ ಸಮಸ್ಯೆ ನಿವಾರಣೆ ಸಲುವಾಗಿ ಲೆವೆಲ್‌ ಕ್ರಾಸಿಂಗ್‌ ವಿಸ್ತರಿಸಲಾಗಿದ್ದು ಅದನ್ನೂ ಸಂಸದರು ಲೋಕಾರ್ಪಣೆಗೊಳಿಸಿದರು.

ADVERTISEMENT

‘ವಾಹನದಟ್ಟಣೆ ಸಮಸ್ಯೆ ನೀಗಿಸಲು ನಗರದಲ್ಲಿ ಉಪನಗರ ರೈಲು ಯೋಜನೆ ತ್ವರಿತವಾಗಿ ಅನುಷ್ಠಾನಗೊಳ್ಳಬೇಕು. ಇದಕ್ಕೆ ಸಹಕರಿಸುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮತ್ತೊಮ್ಮೆ ಒತ್ತಾಯಿಸುತ್ತೇನೆ’ ಎಂದು ಪಿ.ಸಿ.ಮೋಹನ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.