ಬಂಧನ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಕುದುರೆ ರೇಸ್ ಬೆಟ್ಟಿಂಗ್ ನಡೆಸುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹2 ಲಕ್ಷ ನಗದು ಜಪ್ತಿ ಮಾಡಿಕೊಂಡಿದ್ದಾರೆ.
ಕುದುರೆ ರೇಸ್‌ಗೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಹಣ ಪಾವತಿಸಿಕೊಂಡು ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
‘ಬ್ಯಾಂಕ್ ಖಾತೆಗಳ ಮೂಲಕ ₹3.48 ಲಕ್ಷವನ್ನು ವರ್ಗಾವಣೆ ಮಾಡಿ ಕೊಂಡಿರುವುದು ಗೊತ್ತಾಗಿದೆ. ಖಾತೆಗಳನ್ನು ಪತ್ತೆಹಚ್ಚಿ ವಹಿವಾಟು ಸ್ಥಗಿತಗೊಳಿಸಲು ಬ್ಯಾಂಕ್ ಅಧಿಕಾರಿ
ಗಳಲ್ಲಿ ಮನವಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.