ADVERTISEMENT

15 ದಿನದಲ್ಲಿ ಹೊಸಕೆರೆಹಳ್ಳಿ ಮೇಲ್ಸೇತುವೆ ಪೂರ್ಣ: ತುಷಾರ್ ಗಿರಿನಾಥ್

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 18:14 IST
Last Updated 11 ಅಕ್ಟೋಬರ್ 2025, 18:14 IST
<div class="paragraphs"><p>ತುಷಾರ್&nbsp;ಗಿರಿನಾಥ್</p></div>

ತುಷಾರ್ ಗಿರಿನಾಥ್

   

ಬೆಂಗಳೂರು: ಹೊಸಕೆರೆಹಳ್ಳಿ ಜಂಕ್ಷನ್ ಮೇಲ್ಸೇತುವೆ ಬಾಕಿ ಕಾಮಗಾರಿಯನ್ನು 15 ದಿನಗಳಲ್ಲಿ ಪೂರ್ಣಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಹೊಸಕೆರೆಹಳ್ಳಿ ಜಂಕ್ಷನ್‌ನಲ್ಲಿನ 500 ಮೀಟರ್ ಉದ್ದದ ಮೇಲ್ಸೇತುವೆ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಒಂದು ಭಾಗದಲ್ಲಿ ಡೌನ್‌ ರ‍್ಯಾಂಪ್‌ಗೆ ವೆಟ್ ಮಿಕ್ಸ್ ಹಾಕಿದ್ದು, ಡಾಂಬರೀಕರಣ ಮಾಡುವ ಕೆಲಸ ಬಾಕಿಯಿದೆ. ಮತ್ತೊಂದು ಬದಿ ವೆಟ್ ಮಿಕ್ಸ್ ಹಾಕಿ ಡಾಂಬರೀಕರಣ ಮಾಡಬೇಕಿದೆ. ಮಳೆಯಿಂದ ವಿಳಂಬವಾಗಿದ್ದು, ಕೂಡಲೇ ಪೂರ್ಣಗೊಳಿಸಬೇಕು ಎಂದರು.

ADVERTISEMENT

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾತನಾಡಿ, ‘ಮೇಲ್ಸೇತುವೆಯ ಎರಡೂ ಬದಿಯ ಸರ್ವೀಸ್ ರಸ್ತೆಯಲ್ಲಿ ಹಾಳಾದ ಭಾಗಗಳನ್ನು ಕೂಡಲೇ ದುರಸ್ತಿಪಡಿಸಿ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.