ADVERTISEMENT

ಬೆಂಗಳೂರು | ಕೋವಿಡ್ ಸೋಂಕಿತರಿಗೆ ಹಣ ಮರಳಿಸಿದ ಆಸ್ಪತ್ರೆಗಳು

​ಪ್ರಜಾವಾಣಿ ವಾರ್ತೆ
Published 27 ಜುಲೈ 2020, 20:52 IST
Last Updated 27 ಜುಲೈ 2020, 20:52 IST

ಬೆಂಗಳೂರು: ಚಿಕಿತ್ಸೆ ಹೆಸರಿನಲ್ಲಿ ವಸೂಲಿ ಮಾಡಿದ್ದ ಹೆಚ್ಚುವರಿ ಹಣವನ್ನು ಖಾಸಗಿ ಆಸ್ಪತ್ರೆಯವರು ಕೊರೊನಾ ಸೋಂಕಿತರ ಬ್ಯಾಂಕ್‌ ಖಾತೆಗಳಿಗೆ ಜಮೆ ಮಾಡಿದ್ದಾರೆ.

ನಗರದ ಕೆಲ ಖಾಸಗಿ ಆಸ್ಪತ್ರೆಯವರು ದುಬಾರಿ ಹಣ ವಸೂಲಿ ಮಾಡುತ್ತಿದ್ದ ಹಾಗೂ ನಿಗದಿತ ಸಂಖ್ಯೆಯಲ್ಲಿ ಬೆಡ್‌ ಕಾಯ್ದಿರಿಸದ ದೂರುಗಳು ಕೇಳಿಬಂದಿದ್ದವು. ರಾಜ್ಯ ಸರ್ಕಾರ ನೇಮಿಸಿರುವ ಐಎಎಸ್‌ ಅಧಿಕಾರಿ ಹರ್ಷ ಗುಪ್ತ ಹಾಗೂ ಐಪಿಎಸ್ ಅಧಿಕಾರಿ ಡಿ.ರೂಪಾ ನೇತೃತ್ವದ ತಂಡವು ಖಾಸಗಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿತ್ತು.

ಹಲವು ಆಸ್ಪತ್ರೆಯವರು ನಿಯಮ ಉಲ್ಲಂಘಿಸಿದ್ದು ಪತ್ತೆಯಾಗಿತ್ತು. ಹಲವು ಕೊರೊನಾ ಸೋಂಕಿತರಿಂದ ಚಿಕಿತ್ಸೆಗಾಗಿ ₹24 ಲಕ್ಷ ಹೆಚ್ಚುವರಿ ಹಣವನ್ನು ವಸೂಲಿ ಮಾಡಿದ್ದು ಗೊತ್ತಾಗಿತ್ತು. ಹಣವನ್ನೆಲ್ಲ ಸೋಂಕಿತರ ಖಾತೆಗಳಿಗೆ ಜಮೆ ಮಾಡುವಂತೆ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದರು. ಇದಾದ ಎರಡು ದಿನಗಳಲ್ಲಿ ಆಸ್ಪತ್ರೆಯವರು, ಬಹುತೇಕ ಸೋಂಕಿತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.