ADVERTISEMENT

ಸಾರಿಗೆ ಮುಷ್ಕರ ಬೇಡ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2021, 14:37 IST
Last Updated 6 ಏಪ್ರಿಲ್ 2021, 14:37 IST

ಬೆಂಗಳೂರು: ‘ಕೋವಿಡ್‌ ಎರಡನೇ ಅಲೆ ಶುರುವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು. ಸಾರಿಗೆ ಸೇವೆಯನ್ನೇ ನಂಬಿಕೊಂಡಿರುವ ಶುಶ್ರೂಷಕಿಯರು, ಲ್ಯಾಬ್‌ ಟೆಕ್ನಿಷಿಯನ್‌ಗಳು ಹಾಗೂ ಸ್ವಚ್ಛತಾ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ನೌಕರರು ಮುಷ್ಕರ ಕೈಬಿಡಬೇಕು’ ಎಂದು ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘವು ಮನವಿ ಮಾಡಿದೆ.

‘ರೈತರು, ಹೋಟೆಲ್‌ ಕಾರ್ಮಿಕರು, ಬೀದಿ ಬದಿ ವ್ಯಾಪಾರಿ ಹಾಗೂ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುವವರೂ ಸಾರಿಗೆ ವ್ಯವಸ್ಥೆಯ ಮೇಲೆ ಅವಲಂಬಿತರಾಗಿದ್ದಾರೆ. ಸಾರಿಗೆ ಸೇವೆಯಲ್ಲಿ ವ್ಯತ್ಯಯವಾದರೆ ಇವರೆಲ್ಲಾ ತೊಂದರೆ ಅನುಭವಿಸಬೇಕಾಗುತ್ತದೆ. ಹೀಗಾಗಿ ಇನ್ನು ಆರು ತಿಂಗಳು ಪ್ರತಿಭಟನೆ ಅಥವಾ ಮುಷ್ಕರ ನಡೆಸದಿರುವುದು ಒಳಿತು’ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT