ADVERTISEMENT

ಹೋಟೆಲ್‍ಗಳ ವಿರುದ್ಧ ಸುಳ್ಳು ಸುದ್ಧಿ: ಸೈಬರ್ ಕ್ರೈಂಗೆ ದೂರು

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 7:58 IST
Last Updated 27 ಜೂನ್ 2020, 7:58 IST
ಸುಳ್ಳು ಸುದ್ದಿ–ಪ್ರಾತಿನಿಧಿಕ ಚಿತ್ರ
ಸುಳ್ಳು ಸುದ್ದಿ–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: 'ನಗರದ ಪ್ರಮುಖ ಹೋಟೆಲ್‍ಗಳ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ್ದು, ಸಾರ್ವಜನಿಕರು ಈ ಸ್ಥಳಗಳಿಂದ ದೂರವಿರಿ' ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಸೈಬರ್ ಕ್ರೈಂಗೆ ಶುಕ್ರವಾರ ದೂರು ನೀಡಿದೆ.

ಪಟ್ಟಿಯಲ್ಲಿ ನಗರದ ಪ್ರತಿಷ್ಠಿತ ಹೋಟೆಲ್‍ಗಳು, ಬೇಕರಿ, ಉದ್ಯಾನಗಳ ಹೆಸರನ್ನು ಹಾಕಲಾಗಿದ್ದು, ಈ ಭಾಗಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿರುವುದಾಗಿ ಸುಳ್ಳು ಸಂದೇಶವೊಂದು ಕಳೆದೆರಡು ದಿನಗಳಿಂದ ಹರಿದಾಡುತ್ತಿದೆ. ಇದರಿಂದಾಗಿ, ಗ್ರಾಹಕರು ಹಾಗೂ ಹೋಟೆಲ್ ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದರು. ಈ ಸುದ್ದಿ ಸುಳ್ಳು ಎಂದು ಹೋಟೆಲ್‌ಗಳ ಮಾಲೀಕರು 'ಪ್ರಜಾವಾಣಿ'ಗೆ ಸ್ಪಷ್ಟಪಡಿಸಿದರು.

'ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಸುಳ್ಳುಸುದ್ದಿ ಹಬ್ಬಿಸಿದ್ದಾರೆ. ಯಾವುದೇ ಹೋಟೆಲ್ ಸಿಬ್ಬಂದಿಗೆ ಕೊರೊನಾ ಸೋಂಕು ಹರಡಿಲ್ಲ. ಎಲ್ಲ ಹೋಟೆಲ್‍ಗಳಲ್ಲಿ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ' ಎಂದು ಬೃಹತ್ ಬೆಂಗಳೂರು ಹೋಟೆಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದರು.

ADVERTISEMENT

'ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.