ADVERTISEMENT

ಬೆಂಗಳೂರು: ಟೆಕಿ ಮನೆಯಲ್ಲಿ ಚಿನ್ನಾಭರಣ ಕಳವು

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 14:27 IST
Last Updated 27 ಜುಲೈ 2025, 14:27 IST
ಕಳ್ಳತನ (ಪ್ರಾತಿನಿಧಿಕ ಚಿತ್ರ)
ಕಳ್ಳತನ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ಸಾಫ್ಟ್‌ವೇರ್‌ ಎಂಜಿನಿಯರ್ ಒಬ್ಬರ ಮನೆಯ ಬಾಗಿಲಿನ ಬೀಗ ಒಡೆದು ನಗದು, ಚಿನ್ನಾಭರಣ ಸೇರಿದಂತೆ ₹ 30 ಲಕ್ಷ ಮೌಲ್ಯದ ಸ್ವತ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಮೂಲದ ನಟೇಶ್ ಅವರು ಮಲ್ಲತಹಳ್ಳಿಯ ಎನ್‌ಜಿಇಎಫ್ ಬಡಾವಣೆಯಲ್ಲಿ ವಾಸವಾಗಿದ್ದಾರೆ. ಕಾರ್ಯನಿಮಿತ್ತ ಶನಿವಾರ ಮಧ್ಯಾಹ್ನ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಮೈಸೂರಿಗೆ ಹೋಗಿದ್ದರು. ರಾತ್ರಿ ವಾಪಸ್ ಬಂದು ನೋಡಿದಾಗ ಕಳ್ಳರು ಬೀಗ ಒಡೆದು ಒಳನುಗ್ಗಿರುವುದು ಗೊತ್ತಾಗಿದೆ.

ಬೀರುವಿನ ಬೀಗ ಒಡೆದು ಅದರಲ್ಲಿದ್ದ ₹3 ಲಕ್ಷ ನಗದು ಹಾಗೂ 300 ಗ್ರಾಂ ಚಿನ್ನಾಭರಣವನ್ನು ದೋಚಿ ಪರಾಯಾಗಿರುವುದು ಕಂಡು ಬಂದಿದೆ.

ADVERTISEMENT

ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.