ADVERTISEMENT

ನಕಲಿ ಕೀ ಬಳಸಿ ಚಿನ್ನಾಭರಣ ಕಳವು

​ಪ್ರಜಾವಾಣಿ ವಾರ್ತೆ
Published 8 ಜೂನ್ 2025, 16:02 IST
Last Updated 8 ಜೂನ್ 2025, 16:02 IST
   

ಬೆಂಗಳೂರು: ಬಕ್ರಿದ್ ಹಬ್ಬದ ಪ್ರಯುಕ್ತ ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಹೊರಗೆ ಹೋಗಿದ್ದ ವೇಳೆ ನಕಲಿ ಕೀ ಬಳಸಿ ಕಳ್ಳರು ನಗದು ಸೇರಿ ₹1.25 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಎಂಎಂ ಲೇಔಟ್‌ ನಿವಾಸಿ ಶಹತಾಜ್ ಬೇಗಂ ಅವರು ಹಬ್ಬದ ಪ್ರಯುಕ್ತ ಮನೆಗೆ ಬೀಗ ಹಾಕಿ ಎಲ್ಲರೂ ಹೊರಗೆ ಹೋಗಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ.

‘ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಕಳ್ಳರು ನಕಲಿ ಕೀ ಬಳಸಿ ಬೀಗ ತೆಗೆದು, ಬೀರುವಿನಲ್ಲಿದ್ದ ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ’ ಎಂದು ಶಹತಾಜ್ ಅವರು ದೂರು ನೀಡಿದ್ದಾರೆ.

ADVERTISEMENT

ಡಿ.ಜಿ. ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆರೋಪಿ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.