ರಾಜರಾಜೇಶ್ವರಿನಗರ: ‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಾಡಪ್ರಭು ಕೆಂಪೇಗೌಡ ಬಡಾವಣೆ ಅಭಿವೃದ್ದಿಗೆ ಪ್ರಾಥಮಿಕ ಅಧಿಸೂಚನೆ ಹೊರಡಿಸುವುದಕ್ಕೂ ಮೊದಲು ನಿರ್ಮಿಸಿದ್ದ ಮನೆ, ಕಟ್ಟಡಗಳನ್ನು ಒಡೆಯಲು ಬಿಡುವುದಿಲ್ಲ’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದರು.
ಕೊಡಿಗೇನಹಳ್ಳಿಯಲ್ಲಿ ನಗರ ಜಿಲ್ಲಾಡಳಿತ, ಉತ್ತರ ತಾಲ್ಲೂಕು ಪಂಚಾಯಿತಿ ಮತ್ತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ತ್ರಿಚಕ್ರ ವಾಹನ, ಅಂಗನವಾಡಿ ಕೇಂದ್ರಗಳಿಗೆ ವಿವಿಧ ಸವಲತ್ತು, ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹದನ ಸೇರಿದಂತೆ ಹಲವು ಸೌಲಭ್ಯಗಳನ್ನು ವಿತರಿಸಿ ಅವರು ಮಾತನಾಡದಿರು.
‘ಹತ್ತಾರು ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂಮಿ ಇಲ್ಲದ ಎಲ್ಲ ಬಡ ರೈತರಿಗೆ ಪೋಡಿ, ಪಹಣಿ ದೊರಕಿಸಿ ಕೊಡಲು ಕ್ರಮವಹಿಸಲಾಗುವುದು’ ಎಂದರು.
ಬೆಂಗಳೂರು ಉತ್ತರ ತಾಲ್ಲೂಕು ತಹಶೀಲ್ದಾರ್ ಮಧುರಾಜ್, ಬೆಂಗಳೂರು ಉತ್ತರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜೋಸೆಫ್, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಭಾಗೀರಥಿ, ಪಂಚಾಯಿತಿ ಅಧ್ಯಕ್ಷೆ ವಿನೋದ, ಮಾಜಿ ಅಧ್ಯಕ್ಷರಾದ ಎನ್.ನಂಜುಂಡೇಶ್, ದೇವರಾಜು, ಸದಸ್ಯ ಸಿದ್ದಲಿಂಗಸ್ವಾಮಿ, ರಂಗಕರ್ಮಿ ಕೆ.ವಿ.ನಾಗರಾಜುಮೂರ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.