
ರಾಜರಾಜೇಶ್ವರಿನಗರ: ಮಾಗಡಿ ರಸ್ತೆಯ ಬಿಇಎಲ್ ಬಡಾವಣೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ವತಿಯಿಂದ ಒಂಟಿ ಮನೆ ಮತ್ತು ನಿವೇಶನ ಹಕ್ಕು ಪತ್ರ, 94 ಸಿಸಿ ಅಡಿಯಲ್ಲಿ ಹಕ್ಕು ಪತ್ರಗಳನ್ನು ವಿತರಿಸಲಾಯಿತು.
ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ‘ಸರ್ಕಾರದಿಂದ ಸಿಗುವ ಸವಲತ್ತುಗಳು ದುರುಪಯೋಗವಾಗಬಾರದು. ಹತ್ತಾರು ದಶಕ ಬಾಳಿಕೆ ಬರುವಂತಹ ಮನೆ ಕಟ್ಟಿಕೊಂಡು ನೆಮ್ಮದಿಯ ಜೀವನ ಸಾಗಿಸಿ’ ಎಂದು ತಿಳಿಸಿದರು.
ಮಾಗಡಿ ಮುಖ್ಯರಸ್ತೆಯಿಂದ ತುಮಕೂರು ರಸ್ತೆ, ಗರುಡಪ್ಪ ವೃತ್ತದಿಂದ ಚೇತನ್ ಸರ್ಕಲ್, ಡಿ. ಗ್ರೂಪ್ ವೃತ್ತದಿಂದ ಕೆಂಪೇಗೌಡ ವೃತ್ತದವರೆಗೆ ಕೈಗೊಂಡಿರುವ ₹23 ಕೋಟಿ ವೆಚ್ಚದ ಡಾಂಬರೀಕರಣ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಜಿಬಿಎ ಅಧಿಕಾರಿಗಳಾದ ನಾಗರಾಜ್ ಶಿಂಗ್ರಿ, ಬಿ.ರಮೇಶ್, ಚಿಕ್ಕಗೂಳಿಗೌಡ, ಕಲ್ಯಾಣಾಧಿಕಾರಿ ಶ್ರೀನಿವಾಸ್, ಬೆಸ್ಕಾಂ ಹಿರಿಯ ಅಧಿಕಾರಿ ಕೆ.ಶಿವಕುಮಾರ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.