ADVERTISEMENT

ಹುವೈನಿಂದ 2 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ

ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಜತೆಗೆ ನಿಯೋಗದ ಚರ್ಚೆ

​ಪ್ರಜಾವಾಣಿ ವಾರ್ತೆ
Published 21 ಮೇ 2020, 20:38 IST
Last Updated 21 ಮೇ 2020, 20:38 IST
ಬೆಂಗಳೂರಿನಲ್ಲಿ ಗುರುವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಹುವೈ ಕಂಪನಿಯ ನಿಯೋಗದ ಜತೆಗೆ ಮಾತುಕತೆ ನಡೆಸಿದರು
ಬೆಂಗಳೂರಿನಲ್ಲಿ ಗುರುವಾರ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು ಹುವೈ ಕಂಪನಿಯ ನಿಯೋಗದ ಜತೆಗೆ ಮಾತುಕತೆ ನಡೆಸಿದರು   

ಬೆಂಗಳೂರು: ‘ಸರ್ಕಾರಿ ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಕಾಲೇಜುಗಳ 2 ಸಾವಿರ ವಿದ್ಯಾರ್ಥಿಗಳಿಗೆ ಮೂಲ ತಂತ್ರಜ್ಞಾನ ಹಾಗೂ ಕೌಶಲ ತರಬೇತಿ ನೀಡಲು ಹುವೈ ಸಂಸ್ಥೆ ಮುಂದೆ ಬಂದಿದೆ’ ಎಂದು ಉಪಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಹುವೈ ಟೆಲಿ ಕಮುನಿಕೇಷನ್ ಎಂಟರ್‌ಪ್ರೈಸಸ್‌ನ ಮುಖ್ಯಸ್ಥ ಡೆರೆಕ್ ಹು ಮತ್ತು ಉಪಾಧ್ಯಕ್ಷ ಸ್ಟ್ಯಾಂಡಿ ನೇತೃತ್ವದ ‌ನಿಯೋಗವನ್ನು ಗುರುವಾರ ಇಲ್ಲಿ ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

‘ಕೃತಕ ಬುದ್ಧಿಮತ್ತೆಯಂತಹ ಅತ್ಯಾಧುನಿಕ ತಂತ್ರಜ್ಞಾನ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್‌ ಕೋರ್ಸ್‌ ನಡೆಸಲು ಸಿದ್ಧ ಎಂದು ಹುವೈ ಸಂಸ್ಥೆಯವರು ತಿಳಿಸಿದ್ದಾರೆ. ಕಾಲೇಜುಗಳ ಜತೆ ಕಾರ್ಯ ನಿರ್ವಹಿಸಲು ಅವರಿಗೆ ಅನುಕೂಲ ಮಾಡಿಕೊಡಲಾಗು
ವುದು. ವಿದ್ಯಾರ್ಥಿಗಳ ಕೌಶಲ ಅಭಿವೃದ್ಧಿಪಡಿಸುವ ಕಾರ್ಯದಲ್ಲಿ ಹುವೈ ಸಂಸ್ಥೆ ಸರ್ಕಾರದ ಜತೆ ಕೈ ಜೋಡಿಸಲು ಮುಂದೆ ಬಂದಿರುವುದು ಪ್ರಶಂಸಾರ್ಹ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.