ADVERTISEMENT

ಮನೆಯ ಪ್ಯಾಸೇಜ್‌ನಲ್ಲಿ ಪತಿ ಬೆತ್ತಲೆಯಾಗಿ ಓಡಾಟ: ಮಹಿಳಾ ಠಾಣೆಗೆ ಪತ್ನಿ ದೂರು

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 16:14 IST
Last Updated 30 ಡಿಸೆಂಬರ್ 2025, 16:14 IST
   

ಬೆಂಗಳೂರು: ಅತ್ತೆ ಹಾಗೂ ಮಾವನ ಎದುರು, ಮನೆಯ ಪ್ಯಾಸೇಜ್‌ನಲ್ಲಿ ಪತಿ ಬೆತ್ತಲೆಯಾಗಿ ಓಡಾಟ ನಡೆಸುತ್ತಾ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ಪತ್ನಿ ದೂರು ನೀಡಿದ್ದಾರೆ.

‘ಪತಿಯ ವಿಚಿತ್ರ ವರ್ತನೆಯಿಂದ ಬೇಸತ್ತು ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದು ಸಂತ್ರಸ್ತೆ ಹೇಳಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಠಾಣಾ ವ್ಯಾಪ್ತಿಯಲ್ಲಿ ದಂಪತಿ ನೆಲಸಿದ್ದರು.

ಸಾಫ್ಟ್‌ವೇರ್ ಕಂಪನಿಯ ಮಾನವ ಸಂಪನ್ಮೂಲ ವಿಭಾಗದಲ್ಲಿ ಕೆಲಸ ಮಾಡುತ್ತಿರುವಾಗ ಪ್ರೀತಿಸಿ ಮದುವೆ ಆಗಿದ್ದೆವು. ಮದುವೆಯಾದ ನಾಲ್ಕು ತಿಂಗಳ ಬಳಿಕ ಪತಿ ವಿಚಿತ್ರವಾಗಿ ವರ್ತಿಸಲು ಆರಂಭಿಸಿದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.