ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ಮಹೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ದೊಡ್ಡಕಮ್ಮನಹಳ್ಳಿ ನಿವಾಸಿ ಮಹೇಶ್ ಶುಕ್ರವಾರ ತನ್ನ ಪತ್ನಿ ಮೀನಾ ಅವರ ಮೇಲೆ ಕಬ್ಬಿಣ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದರು. ಬಳಿಕ ನಿರ್ಜನ ಪ್ರದೇಶಕ್ಕೆ ತೆರಳಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ.
ಬಾಗೇಪಲ್ಲಿ ತಾಲ್ಲೂಕಿನ ಮೀನಾ ಜತೆ ಮಹೇಶ್ ವಿವಾಹವಾಗಿದ್ದರು. ಮೀನಾ ಅವರಿಗೂ ಇದು ಎರಡನೇ ಮದುವೆ. ಮೊದಲ ಪತಿಯಿಂದ ಪ್ರತ್ಯೇಕವಾಗಿದ್ದ ಮೀನಾ, ತನ್ನ ಇಬ್ಬರು ಮಕ್ಕಳೊಂದಿಗೆ ನಗರಕ್ಕೆ ಬಂದು ನೆಲೆಸಿದ್ದರು. ಮೀನಾ, ಮಕ್ಕಳ ಜತೆ ಮಹೇಶ್ ಅನ್ಯೋನ್ಯವಾಗಿಯೇ ಇದ್ದರು. ಆದರೆ ಕೆಲ ದಿನಗಳಿಂದ ಪತ್ನಿಯ ನಡವಳಿಕೆ ಮೇಲೆ ಅನುಮಾನಗೊಂಡು ಜಗಳವಾಡುತ್ತಿದ್ದರು. ಇದೇ ವಿಚಾರವಾಗಿ ದಂಪತಿ ನಡುವೆ ಮನಸ್ತಾಪವಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.