ಆನೇಕಲ್: ತಾಲ್ಲೂಕಿನ ಹುಸ್ಕೂರು-ಸರ್ಜಾಪುರ ರಸ್ತೆಯದುಃಸ್ಥಿತಿ ಬಗ್ಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕರು, ಸಂಸದರು ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯಜವಾಬ್ದಾರಿಯ ಕೊರತೆಯಿಂದಾಗಿ ರಸ್ತೆಯು ಹದಗೆಟ್ಟಿದೆ ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ.
ಇದೇ ರಸ್ತೆಯಲ್ಲಿ ಬಸ್ ಡಿಪೋ ಇದೆ. ಆದರೆ ವಾಹನಗಳು ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿಯಿದೆ. ಇದು ಸ್ಥಳೀಯ ಆಡಳಿತಕ್ಕೆ ನಾಚಿಕೆಯ ಸಂಗತಿ ಎಂದು ಟ್ವೀಟ್‌ನಲ್ಲಿ ಕುಟುಕಿದ್ದಾರೆ.
ಟ್ವೀಟ್ ಬಗ್ಗೆ ಶಾಸಕ ಬಿ.ಶಿವಣ್ಣ ಅವರು ಪ್ರತಿಕ್ರಿಯಿಸಿ, ‘ಆನೇಕಲ್ ವಿಧಾನಸಭಾ ಕ್ಷೇತ್ರದ ಬಹುತೇಕ ರಸ್ತೆಗಳನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ವ ಋತು ರಸ್ತೆಗಳನ್ನಾಗಿ ಮಾಡಲಾಗಿತ್ತು. ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿತ್ತು. ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ರಸ್ತೆಗಳ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಹುಸ್ಕೂರು ಗೇಟ್‌ನಿಂದ ಹುಸ್ಕೂರುವರೆಗಿನ ಸುಮಾರು 4 ಕಿ.ಮೀ. ರಸ್ತೆ ಅಭಿವೃದ್ಧಿಗೆ ಕ್ರಿಯಾ ಯೋಜನೆಸಿದ್ಧಪಡಿಸಿ ಸಲ್ಲಿಸಲಾಗಿದೆ. ಆದರೆ ಮಂಜೂರಾತಿ ದೊರೆತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.