
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು, ₹1.73 ಕೋಟಿ ಮೌಲ್ಯದ ಹೈಡ್ರೊಪೋನಿಕ್ ಗಾಂಜಾ ಜಪ್ತಿ ಮಾಡಿದ್ದಾರೆ.
ಕೌಲಾಲಂಪುರದಿಂದ ಬಂದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶದಿಂದ ಬಂದ ವ್ಯಕ್ತಿ ವಿಮಾನ ನಿಲ್ದಾಣದಿಂದ ಹೊರಹೋಗುತ್ತಿದ್ದರು. ಆಗ ಆರೋಪಿಯನ್ನು ತಪಾಸಣೆಗೆ ಒಳಪಡಿಸಲಾಯಿತು. ಅವರ ಬ್ಯಾಗ್‌ನಲ್ಲಿ 4.96 ಕೆ.ಜಿ. ಗಾಂಜಾ ಇತ್ತು. ತಕ್ಷಣವೇ ಅವರನ್ನು ವಶಕ್ಕೆ ಪಡೆದು ಬಂಧಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಹೈಡ್ರೊಪೊನಿಕ್ ಗಾಂಜಾವನ್ನು ಎಲ್ಲಿಗೆ ಪೂರೈಸುತ್ತಿದ್ದರು, ಗ್ರಾಹಕರು ಯಾರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.
ಡ್ರಗ್ಸ್ ಪೆಡ್ಲರ್ ಬಂಧನ: ರಸ್ತೆಬದಿಯಲ್ಲಿ ಬೈಕ್ ನಿಲುಗಡೆ ಮಾಡಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಒಬ್ಬರನ್ನು ಜ್ಞಾನಭಾರತಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್‌ನ ಅಂಬಾ ರಾಮ್ (30) ಬಂಧಿತ ಡ್ರಗ್ಸ್ ಪೆಡ್ಲರ್. ಆರೋಪಿಯಿಂದ 13 ಗ್ರಾಂ ಮಾದಕ ವಸ್ತು ಹಾಗೂ ಒಂದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.
ಉಲ್ಲಾಳ ಕೆರೆಯ ಪಕ್ಕದ ರಸ್ತೆಯಲ್ಲಿ ಬೈಕ್ ನಿಲ್ಲಿಸಿಕೊಂಡು ಅಂಬಾ ರಾಮ್ ಅವರು ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.