ADVERTISEMENT

ಪಕ್ಷಾಂತರ ಮಾಡಿ ತಪ್ಪು ಮಾಡಿದೆ: ಎಂ.ಟಿ.ಬಿ ನಾಗರಾಜ್‌

‘ಈಗ ತಪ್ಪಿನ ಅರಿವು ಆಗುತ್ತಿದೆ‘

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 19:19 IST
Last Updated 30 ಏಪ್ರಿಲ್ 2022, 19:19 IST
ಎಂ.ಟಿ.ಬಿ. ನಾಗರಾಜ್‌
ಎಂ.ಟಿ.ಬಿ. ನಾಗರಾಜ್‌   

ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ‘ಒಂದು ಪಕ್ಷ ತೊರೆದು ಇನ್ನೊಂದು ಪಕ್ಷ ಸೇರಿರುವುದುರಾಜಕೀಯ ಜೀವನದಲ್ಲಿ ನಾನು ಮಾಡಿದ ಮೊದಲ ತಪ್ಪು’ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್ ಅವರು ಬಹಿರಂಗವಾಗಿ ಪಶ್ಚಾತ್ತಾಪಪಟ್ಟರು.

ಪುರಸಭಾ ಸಭಾಂಗಣದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜಕೀಯದಲ್ಲಿ ನಾನು ಹಣ ಮಾಡಬೇಕು ಎಂದೇನಿಲ್ಲ. ಆ ವಿಷಯದಲ್ಲಿ ನಾನು ಇಂದಿಗೂ ಪರಿಶುದ್ಧನಾಗಿದ್ದೇನೆ. ರಾಜಕೀಯ ಜೀವನದಲ್ಲಿ ನಾನು ಮಾಡಿದ ಒಂದೇ ಒಂದು ತಪ್ಪು ಎಂದರೆ, ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರಿರುವುದು. ಅದರ ಅರಿವು ಈಗ ಆಗುತ್ತಿದೆ. ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕಡೆಯವರೇ ನನ್ನನ್ನು ಪಕ್ಷದಿಂದ ಹೊರಗೆ ಕಳುಹಿಸಿದರು’ ಎಂದು ಸುಬ್ಬಾರೆಡ್ಡಿ ಅವರತ್ತ ತಿರುಗಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.