ADVERTISEMENT

ಕಂಪನಿಗಳ ಮೇಲೆ ಐ.ಟಿ ದಾಳಿ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 20:03 IST
Last Updated 23 ಆಗಸ್ಟ್ 2018, 20:03 IST

ಬೆಂಗಳೂರು: ಪ್ರಭಾವಿ ರಾಜಕಾರಣಿಗಳ ಜೊತೆ ಸಂಪರ್ಕ ಹೊಂದಿವೆ ಎನ್ನಲಾದ ಕೆಲವು ರಿಯಲ್‌ ಎಸ್ಟೇಟ್‌ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ ಎಂದು ಗೊತ್ತಾಗಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ನಗರದ ವಿವಿಧೆಡೆ ದಾಳಿ ನಡೆದಿದೆ. ಆದರೆ, ಆದಾಯ ತೆರಿಗೆ ಇಲಾಖೆ ಈ ದಾಳಿಯನ್ನು ಖಚಿತಪಡಿಸಿಲ್ಲ.

ಬೌರಿಂಗ್‌ ಕ್ಲಬ್‌ ಲಾಕರ್‌ಗಳಲ್ಲಿ ಭಾರಿ ಬೆಲೆಬಾಳುವ ಜಮೀನುಗಳಿಗೆ ಸಂಬಂಧಿಸಿದ ಕಾಗದಪತ್ರಗಳು ಪತ್ತೆಯಾದ ನಂತರವೂ ರಿಯಲ್ ಎಸ್ಟೇಟ್‌ ಕಂಪನಿಗಳ ಮೇಲೆ ದಾಳಿ ನಡೆದಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.