ವರ್ಗಾವಣೆ
ಬೆಂಗಳೂರು: ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದ ಘಟನೆ ಬೆನ್ನಲ್ಲೇ ಸರ್ಕಾರ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಸಂಪರ್ಕ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣ ವಿಭಾಗದ ಎಡಿಜಿಪಿ ಎಸ್.ಮುರುಗನ್ ಅವರನ್ನು ನೇಮಕಾತಿ ವಿಭಾಗಕ್ಕೆ ನಿಯೋಜಿಸಲಾಗಿದೆ.
ನೇಮಕಾತಿ ವಿಭಾಗದ ಎಡಿಜಿಪಿ ಕೆ.ವಿ.ಶರತ್ ಚಂದ್ರ ಅವರನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ. ಇವರಿಗೆ ರಾಜ್ಯ ಪೊಲೀಸ್ ವಸತಿ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಅಕ್ರಂ ಪಾಷಾ, ಶೆಟ್ಟಣ್ಣವರ್ ವರ್ಗಾವಣೆ
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಅಕ್ರಂ ಪಾಷಾ ಮತ್ತು ಇಲಾಖೆಯ ಕಾರ್ಯದರ್ಶಿ ಸಂಜಯ್ ಶೆಟ್ಟಣ್ಣವರ್ ಅವರನ್ನು ವರ್ಗಾಯಿಸಲಾಗಿದ್ದು, ಇಬ್ಬರಿಗೂ ಯಾವುದೇ ಹುದ್ದೆ ತೋರಿಸಿಲ್ಲ.
ಆಯುಕ್ತರ ಹುದ್ದೆಯನ್ನು ಗೃಹ ಮಂಡಳಿ ಆಯುಕ್ತ ದಯಾನಂದ ಕೆ.ಎ ಅವರಿಗೆ ಹೆಚ್ಚುವರಿಯಾಗಿ ಮತ್ತು ಕಾರ್ಯದರ್ಶಿ ಹುದ್ದೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.