ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್ ಕುಮಾರ್ ಕೆ. ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರ (ಹಣಕಾಸು) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಬಿಬಿಎಂಪಿ ಯಲಹಂಕ ವಲಯ ಆಯುಕ್ತರಾಗಿದ್ದ ಕರಿಗೌಡ ಅವರನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.