ಬೆಂಗಳೂರು: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ದಕ್ಷಿಣ ಭಾರತದಲ್ಲಿ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು (BMC&RI) ಆಯ್ಕೆ ಮಾಡಿದೆ.
ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಈ ರೀತಿಯ ಕೇಂದ್ರ ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಇದರಿಂದ ರಾಜ್ಯದಲ್ಲಿ ಸಂಶೋಧನೆ ಕ್ಷೇತ್ರಕ್ಕೆ ನೆರವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ತಿಳಿಸಿದ್ದಾರೆ.
ಪ್ರಯೋಗಾಲಯದ ಪ್ರಯೋಜನಗಳು:
ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಮುಂದಾಗಿದೆ. ಬ್ಯಾಕ್ಟೀರಿಯಾಲಜಿ, ಮೈಕಾಲಜಿ ಮತ್ತು ಪ್ಯಾರಾಸಿಟಾಲಜಿಗೆ ಸಂಬಂಧಿಸಿದಂತೆ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ (VRDLs) ಆದ್ಯತೆ ನೀಡಲಾಗುತ್ತಿದೆ.
ರೋಗ ನಿರ್ಣಯದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲು ಇದರಿಂದ ಸಾಧ್ಯವಾಗಲಿದೆ, ಈ ನಿಟ್ಟಿನಲ್ಲಿ ನಮ್ಮಲಿನ ಸಾಮರ್ಥ್ಯಗಳನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು ಹೊಂದಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.