ADVERTISEMENT

ಪೌರತ್ವ ಕಾಯ್ದೆ| ಹಿಂಸಾತ್ಮಕವಾಗಿ ಪ್ರತಿಭಟಿಸಿದರೆ ಕಠಿಣ ಕ್ರಮ: ಭಾಸ್ಕರ್ ರಾವ್

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 9:03 IST
Last Updated 18 ಡಿಸೆಂಬರ್ 2019, 9:03 IST
ಭಾಸ್ಕರ್‌ ರಾವ್
ಭಾಸ್ಕರ್‌ ರಾವ್   

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿ ವಿರೋಧಿಸಿ ಹಿಂಸಾತ್ಮಕ ಹಾಗೂ ಅನುಮತಿ ಇಲ್ಲದೆಪ್ರತಿಭಟನಾ ರ್‍ಯಾಲಿಗಳನ್ನು ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

‘ಅಲ್ಲದೆ, ಪ್ರತಿಭಟನೆಗೆ ಅನುಮತಿ ಕೋರಿ ಸಾಕಷ್ಟು ಅರ್ಜಿಗಳು ಬಂದಿವೆ. ಯಾರಿಗೂ ಪ್ರತಿಭಟನೆಗೆ ಅವಕಾಶ ನೀಡದೆ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.ಈಗಾಗಲೇ ಎರಡು ಪ್ರತಿಷ್ಠಿತ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಅವರ ವಿರುದ್ಧ ಕ್ರಮ ಹಾಗೂ ಕಾಲೇಜು ಆಡಳಿತ ಮಂಡಳಿಗೆ ನೋಟಿಸ್ ನೀಡಲು ಚಿಂತನೆ ನಡೆಸಿದ್ದೇವೆ’ಎಂದು ಕಮಿಷನರ್ ಹೇಳಿದರು.

ಉತ್ತರಭಾರತ ಭಾಗದಲ್ಲಿ ನಡೆಯುತ್ತಿರುವ ಗಲಾಟೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ನಗರದಲ್ಲಿ ಕಾನೂನು-ಸುವ್ಯವಸ್ಥೆಗೆ ಭಂಗ ಉಂಟಾದರೆ ಸುಮ್ಮನಿರಲ್ಲ. ಪ್ರತಿಭಟನೆ ನಡೆಸುವುದಾದರೆ ಉತ್ತರ ಭಾರತದಲ್ಲಿಯೇ ಹೋಗಿ ಭಾಗವಹಿಸಿ’ ಎಂದು ಗರಂ ಆಗಿ ಎಚ್ಚರಿಕೆ ನೀಡಿದ್ದಾರೆ.

ADVERTISEMENT

‘ಪ್ರತಿಭಟನೆ ಮಾಡುವ ಪ್ರತಿಯೊಬ್ಬರ ವಿಡಿಯೊ ಚಿತ್ರೀಕರಣಕ್ಕೆ ಸೂಚನೆ ನೀಡಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಚೋದನಕಾರಿ ಪೋಸ್ಟ್ ಹಾಕುವವರ ಮೇಲೆ ಐಟಿ ಸೆಲ್‌ನಿಂದ ನಿಗಾ ವಹಿಸಲಾಗುವುದು’ ಎಂದೂಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.