ADVERTISEMENT

ಅಪಾರ್ಟ್‌ಮೆಂಟ್‌ ಆರ್‌ಡಬ್ಲ್ಯುಎಗಳಿಗೆ ಎಚ್ಚರಿಕೆ ನೀಡಿದ ಸಚಿವ ಆರ್ ಅಶೋಕ್

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 14:25 IST
Last Updated 9 ಆಗಸ್ಟ್ 2021, 14:25 IST
ಆರ್ ಅಶೋಕ್
ಆರ್ ಅಶೋಕ್   

ಬೆಂಗಳೂರು: ‘ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ಕೋವಿಡ್‌ ನಿಯಂತ್ರಣ ಕ್ರಮ ಜಾರಿಗೊಳಿಸಲು ಮುಂದಾಗುವ ಬಿಬಿಎಂಪಿ ಅಧಿಕಾರಿಗಳನ್ನು ಅಥವಾ ಮಾರ್ಷಲ್‌ಗಳನ್ನು ಒಳಗೆ ಬಿಟ್ಟುಕೊಳ್ಳದಿದ್ದರೆ ಅಥವಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಅಂತಹವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ಎಚ್ಚರಿಕೆ ನೀಡಿದರು.

‘ಹಿಂದೆಲ್ಲಾ ಕೊಳೆಗೇರಿಗಳಲ್ಲೇ ಕೋವಿಡ್‌ ಪ್ರಕರಣಗಳು ಜಾಸ್ತಿ ಎನ್ನುತ್ತಿದ್ದರು. ಈಗ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲೇ ಪ್ರಕರಣಗಳು ಹಚ್ಚಾಗಿ ವರದಿಯಾಗುತ್ತಿವೆ. ಮೂರು ಪ್ರಕರಣ ಪತ್ತೆಯಾದ ಕಟ್ಟಡವನ್ನೂ ಕಂಟೈನ್‌ಮೆಂಟ್‌ ವಲಯ ಎಂದು ಗುರುತಿಸಿ ಅಲ್ಲಿನ ನಿವಾಸಿಗಳೆಲ್ಲರನ್ನೂ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸೋಂಕು ಪತ್ತೆ ಆದ ಮಹಡಿಯವರು ಹೊರಗಡೆ ಓಡಾಡದಂತೆ ನಿರ್ಬಂಧಿಸಲಾಗುತ್ತದೆ’ ಎಂದು ಸಚಿವರು ತಿಳಿಸಿದರು.

‘ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ವ್ಯಾಯಾಮದ ಉಪಕರಣಗಳು, ಈಜುಕೊಳ ಮುಂತಾದ ಸೌಕರ್ಯಗಳನ್ನು ಎಲ್ಲರೂ ಬಳಸುತ್ತಾರೆ. ಇದು ಕೂಡಾ ಇಲ್ಲಿ ಸೋಂಕು ಹರಡುವಿಕೆ ಹೆಚ್ಚಳಕ್ಕೆ ಕಾರಣ. ಸೋಂಕು ಪತ್ತೆಯಾದ ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ಇಂತಹ ಸೌಕರ್ಯಗಳ ಬಳಕೆಯನ್ನು ನಿರ್ಬಂಧಿಸಲಾಗುತ್ತದೆ. ವಲಯ ಆಯುಕ್ತರು ತಮ್ಮ ವ್ಯಾಪ್ತಿಯ ವಸತಿ ಸಮುಚ್ಚಯಗಳಿಗೆ ಭೇಟಿ ನೀಡಿ ಇಂತಹ ಸೌಕರ್ಯ ಬಳಕೆ ನಿರ್ಬಂಧಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.