ADVERTISEMENT

ಲ್ಯಾಪ್‌ಟಾಪ್‌ ನೀಡದಿದ್ದರೆ ಆನ್‌ಲೈನ್‌ ಶಿಕ್ಷಣ ನಿಲ್ಲಿಸಿ

ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಒತ್ತಾಯ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 9:09 IST
Last Updated 21 ಆಗಸ್ಟ್ 2020, 9:09 IST

ಬೆಂಗಳೂರು: ನಗರದ ಬಡ ವಿದ್ಯಾರ್ಥಿಗಳಿಗೆ ಬಿಬಿಎಂಪಿ ವತಿಯಿಂದ ಲ್ಯಾಪ್‌ಟಾಪ್‌ ನೀಡುವ ಬಗ್ಗೆ ಕೌನ್ಸಿಲ್‌ ಸಭೆಯಲ್ಲಿ ಕೈಗೊಂಡ ನಿರ್ಣಯ ಅನುಷ್ಠಾನಗೊಳಿಸದಂತೆ ರಾಜ್ಯ ಸರ್ಕಾರ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. ಲ್ಯಾಪ್‌ಟಾಪ್‌ ನೀಡಲು ಸಾಧ್ಯವಾಗದಿದ್ದರೆ, ಶಾಲೆಗಳಲ್ಲಿ ನಡೆಯುತ್ತಿರುವ ಆನ್‌ಲೈನ್ ಶಿಕ್ಷಣವನ್ನೂ ಸರ್ಕಾರ ಸ್ಥಗಿತಗೊಳಿಸಬೇಕು ಎಂದು ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌ ಒತ್ತಾಯಿಸಿದ್ದಾರೆ.

‘ಈಗಾಗಲೇ ನಗರದ ಎಲ್ಲಾ ಶಾಲೆಗಳಲ್ಲಿ ಆನ್‌ ಲೈನ್‌ ಪಾಠಗಳು ಪ್ರಾರಂಭವಾಗಿವೆ. ಬಡ ಹಾಗೂ ಮಧ್ಯಮವರ್ಗದವರು ತಮ್ಮ ಮಕ್ಕಳಿಗಾಗಿ ಮೊಬೈಲ್‌, ಟ್ಯಾಬ್‌ ಅಥವಾ ಲ್ಯಾಪ್‌ಟಾಪ್‌ ಕೊಂಡುಕೊಳ್ಳುವಷ್ಟು ಶಕ್ತಿ ಹೊಂದಿಲ್ಲ. ಇಂತಹ ಕುಟುಂಬಗಳ ವಿದ್ಯಾರ್ಥಿಗಳು ಆನ್‌ಲೈನ್‌ ಪಾಠದಿಂದ ವಂಚಿತರಾಗುತ್ತಿದ್ದಾರೆ’ ಎಂದು ಅವರು ದೂರಿದರು.

‘ತಮ್ಮ ಮಕ್ಕಳಿಗೆ ಲ್ಯಾಪ್‌ಟಾಪ್‌ ನೀಡುವಂತೆ ಪಾಲಿಕೆ ಸದಸ್ಯರಿಗೆ ಹಲವು ಪೋಷಕರು ಮನವಿ ಸಲ್ಲಿಸಿದ್ದಾರೆ. ಹಾಗಾಗಿ ಈ ಬಗ್ಗೆ ಪಾಲಿಕೆ ಸಭೆಯಲ್ಲಿ ಚರ್ಚೆಸಿ ವಿಶೇಷ ಅಭಿವೃದ್ಧಿ ಯೋಜನೆ ಅನುದಾನದಲ್ಲಿ ಲ್ಯಾಪ್‌ ಟಾಪ್‌ ಮತ್ತು ಟ್ಯಾಬ್‌ಗಳನ್ನು ಖರೀದಿಸಲು ನಿರ್ಣಯ ಕೈಗೊಳ್ಳಲಾಗಿತ್ತು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.