ರಾಜರಾಜೇಶ್ವರಿನಗರ: ‘ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ, ನಂತರ ನನ್ನನ್ನು ಮುಟ್ಟಲು ಯಾರಿಂದಲೂ ಸಾಧ್ಯವಿಲ್ಲ ಎಂದು ದುರಹಂಕಾರದ ಮಾತನಾಡುವ ಎಸ್.ಟಿ. ಸೋಮಶೇಖರ್‌ಗೆ ತಾಕತ್ತಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಬರಲಿ’ ಎಂದು ಯಶವಂತಪುರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಟಿ.ಎನ್. ಜವರಾಯಿಗೌಡ ಸವಾಲು ಹಾಕಿದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರವಾಗಿ ಕುಂಬಳಗೋಡುವಿನಲ್ಲಿ ಮತಯಾಚನೆ ಮಾಡಿ ಅವರು ಮಾತನಾಡಿದರು.
ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಾತನಾಡಿ, ‘ದೇಶದ ರಕ್ಷಣೆ, ಅಭಿವೃದ್ದಿಗಾಗಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ಹಿಂದಿನ ಹಲವು ಚುನಾವಣೆಗಳಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮತಗಟ್ಟೆಗಳಲ್ಲಿ ಪರಸ್ಪರ ಹೊಡೆದಾಟ, ಕಿತ್ತಾಟ ನಡೆಸಿದ್ದೀರಿ. ಅದನ್ನೆಲ್ಲ ಮರೆತು ಕೆಲಸ ಮಾಡಿ’ ಎಂದು ಮನವಿ ಮಾಡಿದರು.
ರಾಜ್ಯ ಒಕ್ಕಲಿಗರ ಸಂಘದ ಖಜಾಂಚಿ ಸಿ.ಎಂ. ಮಾರೇಗೌಡ, ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಹಿಂದುಳಿದ ವಿಭಾಗದ ಪ್ರಧಾನ ಕಾರ್ಯದರ್ಶಿ ಆರ್.ಪಿ. ಪ್ರಕಾಶ್, ಬಿಜೆಪಿ ಉಸ್ತುವಾರಿ ಸಚ್ಚಿದಾನಂದಮೂರ್ತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯಕುಮಾರ್, ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ದಕ್ಷಿಣ ತಾಲ್ಲೂಕು ಭೂ ಮಂಜೂರಾತಿ ಸಮಿತಿಯ ಮಾಜಿ ಅಧ್ಯಕ್ಷ ಎ. ಶಿವಕುಮಾರ್, ಉತ್ತರಿ ವೆಂಕಟಪ್ಪ, ಬಂಜಾರುಪಾಳ್ಯ ಮಂಜುನಾಥ್, ಮಾಗಡಿಯ ಬಿಜೆಪಿ ಮುಖಂಡ ಕೆ.ಆರ್. ಪ್ರಸಾದ್, ಮೈಲಸಂದ್ರ ಮುನಿರಾಜು, ಪಾಲಿಕೆ ಮಾಜಿ ಸದಸ್ಯರಾದ ರ. ಆಂಜನಪ್ಪ, ವೀಣಾ ನಾಗರಾಜು, ಎನ್. ನಂಜುಂಡೇಶ್, ಜೆ. ರಮೇಶ್, ಅನಿಲ್ ಚಳಗೇರಿ, ರಂಗರಾಜು ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.