ವರ್ಗಾವಣೆ
ಬೆಂಗಳೂರು: ಏಳು ಮಂದಿ ಐಎಫ್‌ಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹುಲಿ ದಾಳಿ ಪ್ರಕರಣಗಳಿಂದ ವಿವಾದಕ್ಕೆ ಸಿಲುಕಿರುವ ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಎಸ್.ಪ್ರಭಾಕರನ್ ಅವರನ್ನು ವರ್ಗಾವಣೆ ಮಾಡಿದ್ದು ಆ ಜಾಗಕ್ಕೆ ಡಾ.ಸಂತೋಷ್‌ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಅನಿಲ್ ಕುಮಾರ್ ರತನ್– ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂಪನ್ಮೂಲ ನಿರ್ವಹಣೆ. ಸಾಸ್ವತಿ ಮಿಶ್ರಾ–ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಸಿಬ್ಬಂದಿ ನೇಮಕಾತಿ. ಬಿಸ್ವಜಿತ್ ಮಿಶ್ರಾ– ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವನ್ಯಜೀವಿ. ವನಶ್ರೀ ವಿಪಿನ್ ಸಿಂಗ್– ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಕಾರ್ಯಯೋಜನೆ. ಮನೋಜ್ ಕುಮಾರ್ ತ್ರಿಪಾಠಿ – ಹೆಚ್ಚುವರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ವಿಚಕ್ಷಣೆ. ಎಸ್.ಪ್ರಭಾಕರನ್ –ಅರಣ್ಯ ಸಂರಕ್ಷಣಾಧಿಕಾರಿ, ಚಾಮರಾಜನಗರ ವೃತ್ತ. ಡಾ.ಜಿ.ಸಂತೋಷ್‌ಕುಮಾರ್– ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಂಡೀಪುರ ಹುಲಿ ಯೋಜನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.