ADVERTISEMENT

ಬೆಂಗಳೂರು | ಪದವಿ, ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ 

​ಪ್ರಜಾವಾಣಿ ವಾರ್ತೆ
Published 23 ಜುಲೈ 2025, 20:04 IST
Last Updated 23 ಜುಲೈ 2025, 20:04 IST
   

ಬೆಂಗಳೂರು:ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ಬೆಂಗಳೂರು ಪ್ರಾದೇಶಿಕ ಕೇಂದ್ರದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎಂ. ಷಣ್ಮುಗಂ, ‘ಪ್ರವೇಶ ಪರೀಕ್ಷೆ ಇಲ್ಲದೇ ಎಂಬಿಎಗೆ ನೇರ ಪ್ರವೇಶವನ್ನು ಒದಗಿಸಲಾಗುತ್ತಿದೆ. ಬ್ಯಾಚುಲರ್‌ ಆಫ್‌ ಆರ್ಟ್ಸ್‌, ಬ್ಯಾಚುಲರ್ ಆಫ್‌ ಕಾಮರ್ಸ್‌, ಬ್ಯಾಚುಲರ್‌ ಆಫ್‌ ಸೈನ್ಸ್‌ ಪದವಿಗಳನ್ನು ಪ್ರವೇಶ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ 50ರಷ್ಟು ಶುಲ್ಕ ವಿನಾಯಿತಿ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ https://www.ignou.ac.in/ ವೆಬ್‌ಸೈಟ್‌ಗೆ ಭೇಟಿ ನೀಡಬಹುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT