
ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ(ಇಗ್ನೊ) ಬೆಂಗಳೂರು ಪಾದೇಶಿಕ ಕೇಂದ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಶುರುವಾಗಿದ್ದು, ಶಿಕ್ಷಣದ ಜತೆಗೆ ತರಬೇತಿ ನೀಡಲು ಕೌಶಲ ಕೇಂದ್ರವನ್ನೂ ಆರಂಭಿಸಲಾಗುತ್ತದೆ.
ಬೆಂಗಳೂರು: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ(ಇಗ್ನೊ) ಬೆಂಗಳೂರು ಪಾದೇಶಿಕ ಕೇಂದ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ಶುರುವಾಗಿದ್ದು, ಶಿಕ್ಷಣದ ಜತೆಗೆ ತರಬೇತಿ ನೀಡಲು ಕೌಶಲ ಕೇಂದ್ರವನ್ನೂ ಆರಂಭಿಸಲಾಗುತ್ತದೆ.
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಎಂ.ಎ, ಎಂ.ಎಸ್ಸಿ, ಎಂಬಿಎ, ಎಂಸಿಎ, ಡಿಪ್ಲೊಮಾ, ಸರ್ಟಿಫಿಕೇಟ್ ಸಹಿತ 380 ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಪ್ರವೇಶ ಪ್ರಕ್ರಿಯೆಯನ್ನು ಇಗ್ನೊ ಆರಂಭಿಸಿದೆ. 18 ವರ್ಷ ಮೇಲ್ಪಟ್ಟ, ದ್ವಿತೀಯ ಪಿಯುಸಿ ಉತ್ತೀರ್ಣರಾದವರು ಪ್ರವೇಶ ಪಡೆಯಬಹುದು.
ಆನೇಕಲ್ ತಾಲ್ಲೂಕಿನ ಗುಳಿಮಂಗಲದ ರಿಯೋ ಬ್ಯಾಡ್ಮಿಂಟನ್ ಅಕಾಡೆಮಿ ಬಳಿ ಇರುವ ಕೇಂದ್ರ ಕಚೇರಿಯಲ್ಲೂ ಪ್ರವೇಶ ಪಡೆಯಬಹುದು (ವಾಟ್ಸ್ ಆ್ಯಪ್ 9449337272) ಎಂದು ಪ್ರಾದೇಶಿಕ ನಿರ್ದೇಶಕ ಎಂ.ಷಣ್ಮುಗಂ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಾರ್ಷಿಕ ಆದಾಯ ₹2.50 ಲಕ್ಷಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳು ಪ್ರವೇಶ ಶುಲ್ಕದಲ್ಲಿ ಶೇ 50ರಷ್ಟು ವಿನಾಯಿತಿ ಪಡೆಯಬಹುದು. 2025ನೇ ಸಾಲಿನಲ್ಲಿ 3,500 ವಿದ್ಯಾರ್ಥಿಗಳು ವಿವಿಧ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿದ್ದು, ಫೆಬ್ರುವರಿಯಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.