ADVERTISEMENT

ನೋಂದಣಿ ಕಚೇರಿಗಳ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2022, 16:06 IST
Last Updated 25 ಫೆಬ್ರುವರಿ 2022, 16:06 IST

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳ ಕೆಲಸದ ಅವಧಿಯನ್ನು ಬೆಳಿಗ್ಗೆ 8ರಿಂದ ರಾತ್ರಿ 8ರ ತನಕ ವಿಸ್ತರಿಸಲಾಗಿದೆ.

ಬೆಳಿಗ್ಗೆ 10ರಿಂದ ಸಂಜೆ 5.30ರ ತನಕ ಇದ್ದ ಕೆಲಸದ ಅವಧಿಯನ್ನು ಬೆಳಿಗ್ಗೆ 9ರಿಂದ ರಾತ್ರಿ 7 ಗಂಟೆ ತನಕ ಈ ಹಿಂದೆ ವಿಸ್ತರಿಸಲಾಗಿತ್ತು. ಈಗ ಎರಡನೇ ಬಾರಿಗೆ ಅವಧಿ ವಿಸ್ತರಿಸಿ ನೋಂದಣಿ ಉಪ ಮಹಾಪರಿವೀಕ್ಷಕರು (ಆಡಳಿತ ಮತ್ತು ಕಾನೂನು) ಆದೇಶ ಹೊರಡಿಸಿದ್ದಾರೆ.

ಮಾರ್ಚ್ ತಿಂಗಳಿನ ಎಲ್ಲ ಶನಿವಾರವೂ ರಾಜ್ಯದ ಎಲ್ಲ ಉಪನೋಂದಣಾಧಿಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.