ADVERTISEMENT

ಐಐಬಿಎಸ್‌: ಪರೀಕ್ಷೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2020, 21:38 IST
Last Updated 19 ಆಗಸ್ಟ್ 2020, 21:38 IST

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಇರುವ ಐಐಬಿಎಸ್‌ ಕಾಲೇಜು ‘ನಾಗರಿಕ ಸೇವೆಗಳ ಕೋಚಿಂಗ್ ವಿದ್ಯಾರ್ಥಿವೇತನ ಪರೀಕ್ಷೆ – 2020’ನ್ನು ನಡೆಸಲಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಗುರುವಾರ ಕಡೆಯ ದಿನ.

10ನೇ ತರಗತಿ ಮಟ್ಟದ ಸಮಾಜ ವಿಜ್ಞಾನ, ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ಪಠ್ಯಕ್ರಮ ಆಧರಿಸಿ ಪರೀಕ್ಷೆಗಳು ನಡೆಯಲಿವೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. ಮೊದಲ ನೂರು ರ್‍ಯಾಂಕ್ ಪಡೆದವರಿಗೆ ಉಚಿತವಾಗಿ ಶಿಕ್ಷಣ ಹಾಗೂ ಕೋಚಿಂಗ್ ನೀಡಲಾಗುತ್ತದೆ.

ಹತ್ತನೇಯ ತರಗತಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ, ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ ಆರ್ಥಿಕವಾಗಿ ಹಿಂದುಳಿದಿರುವವರು, ಇಡಬ್ಲ್ಯೂಎಸ್‌ ವರ್ಗಕ್ಕೆ ಸೇರಿದವರು, ಬಿಪಿಎಲ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಸೇರಿದವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ 9620062082, 9742356572 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.