ADVERTISEMENT

ಐಐಎಸ್‌ಸಿ ಪರಿಷತ್‌ನ ಸದಸ್ಯರಾಗಿ ಸಂಸದ ಜಿ.ಕುಮಾರ ನಾಯಕ, ತೇಜಸ್ವಿ ಸೂರ್ಯ ಆಯ್ಕೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 19:34 IST
Last Updated 6 ಡಿಸೆಂಬರ್ 2025, 19:34 IST
   

ನವದೆಹಲಿ: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಪರಿಷತ್‌ನ ಸದಸ್ಯರಾಗಿ ರಾಯಚೂರು ಸಂಸದ ಜಿ.ಕುಮಾರ ನಾಯಕ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಚುನಾಯಿತರಾಗಿದ್ದಾರೆ. 

ಸಂಸ್ಥೆಗೆ ಲೋಕಸಭೆಯಿಂದ ಇಬ್ಬರನ್ನು ಚುನಾವಣೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಸಲ ನಡೆದ ಚುನಾವಣೆಯಲ್ಲಿ ಇವರಿಬ್ಬರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT