ADVERTISEMENT

ಐಐಎಸ್‌ಸಿ: ಪಿಎಚ್‌.ಡಿ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 3:47 IST
Last Updated 4 ಮಾರ್ಚ್ 2021, 3:47 IST

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್‌ಸಿ) ಪಿಎಚ್‌.ಡಿ ವಿದ್ಯಾರ್ಥಿಯೊಬ್ಬರು ಕ್ಯಾಂಪಸ್‌ನ ಹಾಸ್ಟೆಲ್ ಕೊಠಡಿಯಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಂಸ್ಥೆಯ ನ್ಯಾನೊ ಸೈನ್ಸ್ ಹಾಗೂ ಎಂಜಿನಿಯರಿಂಗ್‌ ವಿಭಾಗದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡುತ್ತಿದ್ದ ಬಿಹಾರ ಮೂಲದರಣದೀರ್ ಕುಮಾರ್ (34) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.

‘ಕೋಣೆಯಲ್ಲಿ ಯಾವುದೇ ಮರಣ ಪತ್ರ ಪತ್ತೆಯಾಗಿಲ್ಲ. ಸಂಸ್ಥೆಯಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಲಾಗಿದೆ. ಆತ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ’ ಎಂದು ಸದಾಶಿವನಗರ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

ಮತ್ತೊಬ್ಬ ವಿದ್ಯಾರ್ಥಿ ಸಾವು: ‘ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಎಂ.ಟೆಕ್‌ ವಿದ್ಯಾರ್ಥಿಯೊಬ್ಬ ಫುಟ್‌ಬಾಲ್ ಆಡುತ್ತಿದ್ದಾಗ ಏಕಾಏಕಿ ಕುಸಿದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಸಂಸ್ಥೆಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು. ಕ್ಯಾಂಪಸ್‌ನಲ್ಲಿ ಸಂಭವಿಸಿದ ಈ ಎರಡೂ ಘಟನೆಗಳಿಂದ ಅತೀವ ನೋವಾಗಿದೆ’ ಎಂದು ಸಂಸ್ಥೆ ತಿಳಿಸಿದೆ.

‘ಐಐಎಸ್‌ಸಿ ಸಮುದಾಯದ ಸದಸ್ಯರುಮಾನಸಿಕ ಖಿನ್ನತೆ ಸೇರಿದಂತೆ ವಿವಿಧ ಸಮಸ್ಯೆಗಳಿಗೆ 080-47113444 ಸಂಖ್ಯೆಗೆ ಕರೆ ಮಾಡಿ, ಮನೋರೋಗ ತಜ್ಞರಿಂದ ಸಮಾಲೋಚನೆ ಪಡೆದುಕೊಳ್ಳಬಹುದು ಅಥವಾhttps://wellness.iisc.ac.in ಸಂಪರ್ಕಿಸಬಹುದು’ ಎಂದು ಐಐಎಸ್‌ಸಿ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.